ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಹೊಸ ಜವಾಬ್ದಾರಿ
ಮುಂಬರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದ ಸಿದ್ದತೆ.
ಬೆಂಗಳೂರು: ಕರ್ನಾಟಕ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಹಾರಾಷ್ಟ್ರ ರಾಜ್ಯ ಉಸ್ತುವಾರಿಯನ್ನಾಗಿ ನೇಮಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊಸ ಜವಾಬ್ದಾರಿ ದೊರೆತಿದೆ.
ಮುಂಬರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಚುನಾವಣೆ ನಡೆಯುವ ರಾಜ್ಯಗಳಿಗೆ ಎಐಸಿಸಿ ಉಸ್ತುವಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ.