ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್(85) ಇಹಲೋಕ ತ್ಯಜಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ನಮಾಝ್ ಗೆ ತೆರಳಲು ಸಿದ್ದವಾಗುತ್ತಿದ್ದ ಅವರು ಕೊಲ್ಸ್ ಪಾರ್ಕ್ ಸಮೀಪವಿರುವ ಅವರ ಅವರ ಮನೆಯಲ್ಲಿ ಕುಸಿದು ಬಿದ್ದರು. ಬಳಿಕ ಅವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಜಾಫರ್ ಷರೀಫ್ ಅವರನ್ನು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟೀಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ತುರ್ತು ನಿಗಾ ಘಟಕದಲ್ಲಿ ಹಿರಿಯ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು.