ಬಿಜೆಪಿ ಮುನ್ನಡೆ ಹಿನ್ನಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ದಾಖಲೆ ಏರಿಕೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 300 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ ಪರಿಣಾಮವಾಗಿ ಸೆನ್ಸೆಕ್ಸ್ ಸೂಚ್ಯಂಕದಲ್ಲಿ ಭಾರಿ ಏರಿಕೆ ಕಂಡು ಬಂದಿದೆ.  

Last Updated : May 23, 2019, 10:55 AM IST
ಬಿಜೆಪಿ ಮುನ್ನಡೆ ಹಿನ್ನಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ದಾಖಲೆ ಏರಿಕೆ  title=

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 300 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ ಪರಿಣಾಮವಾಗಿ ಸೆನ್ಸೆಕ್ಸ್ ಸೂಚ್ಯಂಕದಲ್ಲಿ ಭಾರಿ ಏರಿಕೆ ಕಂಡು ಬಂದಿದೆ.  

ಎಸ್ ಮತ್ತು ಪಿ ಬಿಎಸ್ಇ ಸೆನ್ಸೆಕ್ಸ್ 791 ಅಂಕ ಅಧಿಕಗೊಂಡ ಪರಿಣಾಮವಾಗಿ 39,901.59 ಸೂಚ್ಯಂಕ ದಾಖಲಿಸಿದೆ ಮತ್ತು ಎನ್ಎಸ್ಇ ನಿಫ್ಟಿ 50 ಸೂಚ್ಯಂಕವು 231 ಅಂಕಗಳಷ್ಟು ಏರಿಕೆಯಾಗಿ 11,968.95 ಕ್ಕೆ ತಲುಪಿದೆ. ಎನ್ಎಸ್ಸಿಇ ಸೂಚ್ಯಂಕದಲ್ಲಿ ಬ್ಯಾಂಕಿಂಗ್ ವಲಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ. ಈ ಹಿನ್ನಲೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್, ಎಚ್ಡಿಎಫ್ಸಿ, ಲಾರ್ಸೆನ್ ಮತ್ತು ಟೂಬ್ರೊ, ಐಸಿಐಸಿಐ ಬ್ಯಾಂಕ್ ಮತ್ತು ಇಂಡೂಸ್ ಇಂಡಿ ಬ್ಯಾಂಕ್ಗಳು ಸೆನ್ಸೆಕ್ಸ್ನಲ್ಲಿ ಲಾಭ ಗಳಿಸಿವೆ.  

 ಇದೇ ಮೊದಲ ಬಾರಿಗೆ ನಿಫ್ಟಿ ಬ್ಯಾಂಕ್ ಸೂಚ್ಯಂಕವು 31,000 ಅಂಕವನ್ನು ದಾಟಿದೆ. 

Trending News