ಪ್ರತ್ಯೇಕ ಲಿಂಗಾಯತ ಧರ್ಮ: ಸುಪ್ರೀಂ ಮೆಟ್ಟಿಲೇರಲು ನಿರ್ಧಾರ

ಪ್ರತ್ಯೇಕ ಲಿಂಗಾಯ ಧರ್ಮ ಸ್ಥಾನಮಾನಕ್ಕಾಗಿ ಈಗ ಸುಪ್ರೀಂ ಮೆಟ್ಟಿಲು ಹತ್ತಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

Last Updated : Feb 8, 2019, 07:02 PM IST
ಪ್ರತ್ಯೇಕ ಲಿಂಗಾಯತ ಧರ್ಮ: ಸುಪ್ರೀಂ ಮೆಟ್ಟಿಲೇರಲು ನಿರ್ಧಾರ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರತ್ಯೇಕ ಲಿಂಗಾಯ ಧರ್ಮ ಸ್ಥಾನಮಾನಕ್ಕಾಗಿ ಈಗ ಸುಪ್ರೀಂ ಮೆಟ್ಟಿಲು ಹತ್ತಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ ಅವರು ಮುಂಬರುವ ಲೋಕಸಭಾ ಚುನಾವಣೆಯ ನಂತರ ಸುಪ್ರೀಂಗೆ ಮೊರೆ ಹೋಗಲು ತಿರ್ಮಾನಿಸಿರುವುದಾಗಿ ತಿಳಿಸಿದರು. ರಾಜ್ಯ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ, ಆದರೆ ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.ಈ ಹಿನ್ನಲೆಯಲ್ಲಿ ಈಗ ಸುಪ್ರೀಂ ಕೋರ್ಟ್ ಮೂಲಕ ನ್ಯಾಯವನ್ನು ಪಡೆಯಲು ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದರು. 

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ನಡೆಸಿರುವ ಜಾಗತಿಕ ಲಿಂಗಾಯತ ಸಮುದಾಯವು ಈಗ ಕೇಂದ್ರ ಸರ್ಕಾರ ಪ್ರಸ್ತಾವನೆಯನ್ನು ತಿರಸ್ಕರಿಸಿದ ನಂತರ ಈ ನಿರ್ಧಾರಕ್ಕೆ ಬಂದಿದೆ.ಆದ್ದರಿಂದ ಇದೆಲ್ಲವೂ ಕೂಡ ಮುಂಬರುವ ಚುನಾವಣೆ ನಂತರ ಇದಕ್ಕೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.

Trending News