ಗುಜರಾತಿನಲ್ಲಿ ಲಾರಿ-ಆಟೋ ಡಿಕ್ಕಿ; ಏಳು ಮಂದಿ ಸಾವು
ಆಟೋವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ ಘಟನೆ ಗುಜರಾತಿನ ಮಂಕುವಾ ಪ್ರದೇಶದಲ್ಲಿ ಸೋಮವಾರ ಸಂಭವಿಸಿದೆ.
ಕಚ್: ಆಟೋವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ ಘಟನೆ ಗುಜರಾತಿನ ಮಂಕುವಾ ಪ್ರದೇಶದಲ್ಲಿ ಸೋಮವಾರ ಸಂಭವಿಸಿದೆ.
ಅಲ್ಲದೆ, ಆಟೋದಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ ಸಹ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.