ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಭಾನುವಾರ ಬೆಳಿಗ್ಗೆ ಟ್ರಕ್ ಮತ್ತು ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: IPL 2022 : ಗುಜರಾತ್-ರಾಜಸ್ಥಾನ ಫೈನಲ್ ಫೈಟ್: ಅಂತಿಮ ಜಿದ್ದಾಜಿದ್ದಿ ನೋಡಲಿದ್ದಾರಾ ಪಿಎಂ ಮೋದಿ?
ಮೋತಿಪುರ್ ಪ್ರದೇಶದ ಲಖಿಂಪುರ-ಬಹ್ರೈಚ್ ರಾಜ್ಯ ರಸ್ತೆಯಲ್ಲಿ ಭಾನುವಾರ ಮುಂಜಾನೆ ರಸ್ತೆ ಅಪಘಾತ ಸಂಭವಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ ಭಕ್ತರಿದ್ದ ಟೆಂಪೋ ಟ್ರಾವೆಲರ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಬೀದರ್ನ ಗಾಂಧಿಗಂಜ್ ಪ್ರದೇಶದ 16 ಮಂದಿ ಅಯೋಧ್ಯೆಗೆ ಶ್ರೀರಾಮ ಜನ್ಮಭೂಮಿ ಪೂಜೆಗೆಂದು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಟೆಂಪೋ ಚಾಲಕ ಸೇರಿ ಏಳು ಮಂದಿ ಯಾತ್ರಾರ್ಥಿಗಳು ಅಸುನೀಗಿದ್ದಾರೆ.
ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಇಬ್ಬರು ಅಸುನೀಗಿದ್ದಾರೆ. ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಇದನ್ನೂ ಓದಿ: ಬಾಂಬ್ ನಿಂದ ತುಂಬಿದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಪೋಲೀಸರು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.