ಬಾಲಿವುಡ್ ನಟಿ ಶಬಾನಾ ಅಜ್ಮಿ ಕಾರು ಟ್ರಕ್‌ಗೆ ಡಿಕ್ಕಿ, ಪ್ರಾಣಾಪಾಯದಿಂದ ಪಾರು

ಮುಂಬೈ-ಪುಣೆ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಕಾರು ಅಪಘಾತಕ್ಕೀಡಾದ ಕಾರಣ ಹಿರಿಯ ನಟಿ ಶಬಾನಾ ಅಜ್ಮಿ ಗಾಯಗೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.ಅವರನ್ನು ಚಿಕಿತ್ಸೆಗಾಗಿ ನವೀ ಮುಂಬಯಿಯ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Updated: Jan 18, 2020 , 05:48 PM IST
ಬಾಲಿವುಡ್ ನಟಿ ಶಬಾನಾ ಅಜ್ಮಿ ಕಾರು ಟ್ರಕ್‌ಗೆ ಡಿಕ್ಕಿ, ಪ್ರಾಣಾಪಾಯದಿಂದ ಪಾರು
Photo courtesy: ANI

ನವದೆಹಲಿ: ಮುಂಬೈ-ಪುಣೆ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಕಾರು ಅಪಘಾತಕ್ಕೀಡಾದ ಕಾರಣ ಹಿರಿಯ ನಟಿ ಶಬಾನಾ ಅಜ್ಮಿ ಗಾಯಗೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.ಅವರನ್ನು ಚಿಕಿತ್ಸೆಗಾಗಿ ನವೀ ಮುಂಬಯಿಯ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮುಂಬಯಿಯಿಂದ 60 ಕಿ.ಮೀ ದೂರದಲ್ಲಿರುವ ಖಲಾಪುರ ಬಳಿ ಮಧ್ಯಾಹ್ನ 3.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಅವರು ಪ್ರಯಾಣಿಸುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ರಾಯಗಡ್ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಪರಸ್ಕರ್ ಏಜೆನ್ಸಿಗೆ ತಿಳಿಸಿದ್ದಾರೆ. ಅಪಘಾತದಲ್ಲಿ ಕಾರಿಗೆ ಹಾನಿಯಾಗಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿದ್ದ ಶಬಾನಾ ಅವರ ಪತಿ ಮತ್ತು ಗೀತರಚನೆಕಾರ ಜಾವೇದ್ ಅಖ್ತರ್ ಅವರಿಗೆ ಯಾವುದೇ ಗಾಯವಾಗಿಲ್ಲ ಎಂದು ಲೋಕ್ ಸತ್ತಾ ವರದಿ ಮಾಡಿದೆ.