ಮುಂಬೈ: ಮುಂಬರುವ ಉಪಚುನಾವಣೆಯಲ್ಲಿ ಸತಾರ ಲೋಕಸಭಾ ಸ್ಥಾನದಿಂದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ಬುಧವಾರ ತಿಳಿಸಿವೆ. 


COMMERCIAL BREAK
SCROLL TO CONTINUE READING

ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪವಾರ್ ಈ ಹಿಂದೆ ಘೋಷಿಸಿದ್ದರು. ಆದರೆ, ಎನ್‌ಸಿಪಿ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾಗಿರುವ ಉದಯನ್‌ರಾಜೆ ಭೋಸಲೆ ಪ್ರತಿನಿಧಿಸುತ್ತಿದ್ದು, ತಮಗೆ ತಂದೆಯಂತೆ ಇರುವ ಶರದ್ ಪವಾರ್ ಅವರು ತಮ್ಮ ವಿರುದ್ಧ ಸತಾರಾ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದೇ ಆದಲ್ಲಿ, ತಾವು ಕಣದಿಂದ ಹಿಂದೆ ಸರಿಯುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ರಣತಂತ್ರ ರೂಪಿಸಿದೆ ಎನ್ನಲಾಗಿದೆ. 


2014ರ ಸಾರ್ವತ್ರಿಕ ಚುನಾವಣೆಯಲ್ಲಿ ಚುನಾಯಿತರಾದ ನಾಲ್ಕು ಎನ್‌ಸಿಪಿ ಸಂಸದರಲ್ಲಿ ಭೋಸಲೆ ತಮ್ಮ ಪಕ್ಷವನ್ನು ತೊರೆದಿದ್ದರೂ ಸಹ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬಗ್ಗೆ ಇನ್ನೂ ಹೆಚ್ಚಿನ ಗೌರವವನ್ನು ಹೊಂದಿದ್ದಾರೆ.


ಭೋಸಲೆ ಅವರ ರಾಜೀನಾಮೆಯಿಂದ ತೆರವಾಗಿರುವ ಸತಾರಾ ಲೋಕಸಭಾ ಸ್ಥಾನಕ್ಕೆ ಅಕ್ಟೋಬರ್ 21ರಂದು ಉಪಚುನಾವಣೆ ನಡೆಯಲಿದ್ದು, ಅ.24ರಂದು ಮತಎಣಿಕೆ ನಡೆಯಲಿದೆ.