Sharad Pawar Resignation: ಶರದ್ ಪವಾರ್ ಅವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಅವರ ಘೋಷಣೆಯ ನಂತರ ಇದೀಗ ಪಕ್ಷದ ಆಡಳಿತ ಯಾರ ಕೈ ಸೇರಲಿದೆ ಎಂಬ ಬಹುದೊಡ್ಡ ಪ್ರಶ್ನೆ ಉದ್ಭವಿಸಿದೆ. ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರನ್ನು ಈ ಹುದ್ದೆಗೆ ಪವಾರ್ ಅವರ ಉತ್ತರಾಧಿಕಾರಿ ಎಂದು ಪರಿಗಣಿಸಲಾಗಿದೆ ಆದರೆ ಅಜಿತ್ ಪವಾರ್ ಕೂಡ ಪ್ರತಿಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ. ಹೀಗಿರುವಾಗ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಈ ಇಬ್ಬರು ನಾಯಕರ ನಡುವೆ ಪೈಪೋಟಿ ಏರ್ಪಡಲಿದೆ.


COMMERCIAL BREAK
SCROLL TO CONTINUE READING

ಪವಾರ್ ಹುದ್ದೆ ತೊರೆಯಬಾರದು ಎಂದು ಕಾರ್ಯಕರ್ತರು 
ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಮತ್ತು ಹಿರಿಯ ನಾಯಕ ತಮ್ಮ ನಿರ್ಧಾರವನ್ನು ಪ್ರಕಟಿಸಿದ ನಂತರ, ಸಭಾಂಗಣದಲ್ಲಿ ಉಪಸ್ಥಿತರಿದ್ದ ಎನ್‌ಸಿಪಿ ಕಾರ್ಯಕರ್ತರು ಪವಾರ್ ಅವರಿಗೆ ಅವರ ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದರು, ಅವರು ಹಾಗೆ ಮಾಡುವವರೆಗೆ ತಾವು ಸಭಾಂಗಣದಿಂದ ಹೊರಬರುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.



'ಒಂದು ಹೆಜ್ಜೆ ಹಿಂದಕ್ಕೆ ಇಡಬೇಕು'
1999 ರಲ್ಲಿ ಪಕ್ಷ ಪ್ರಾರಂಭವಾದಾಗಿನಿಂದ ಎನ್‌ಸಿಪಿಯ ಚುಕ್ಕಾಣಿ ಹಿಡಿದಿರುವ ಪವಾರ್ ಅವರು ತಮ್ಮ ಭಾಷಣದಲ್ಲಿ, "ನಾನು ರಾಜ್ಯಸಭಾ ಸದಸ್ಯನಾಗಿ ಸಂಸತ್ತಿನಲ್ಲಿ ಮೂರು ವರ್ಷಗಳ ಕಾಲ ಉಳಿದಿದ್ದೇನೆ, ಆ ಸಮಯದಲ್ಲಿ ನಾನು ಮಹಾರಾಷ್ಟ್ರ ಮತ್ತು ಭಾರತಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಗಮನ ಹೆರಿಸಿದ್ದೇನೆ" ಎಂದು ಹೇಳಿದ್ದಾರೆ. "ಯಾವುದೇ ರೀತಿಯಲ್ಲಿ ಜವಾಬ್ದಾರಿ ತೆಗೆದುಕೊಳ್ಳುವುದಿಲ್ಲ. ಮೇ 1, 1960 ರಿಂದ ಮೇ 1, 2023 ರವರೆಗೆ ದೀರ್ಘಾವಧಿಯ ಸಾರ್ವಜನಿಕ ಜೀವನದ ನಂತರ, ಒಂದು ಹೆಜ್ಜೆ ಹಿಂದಕ್ಕೆ ಇಡುವುದು ಅವಶ್ಯಕ. ಹೀಗಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ" ಎಂದು ಪವಾರ್ ಹೇಳಿದ್ದಾರೆ


'ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುವುದಿಲ್ಲ'
ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪವಾರ್, 'ನನ್ನ ಸ್ನೇಹಿತರೇ, ನಾನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿದ್ದರೂ, ನಾನು ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುತ್ತಿಲ್ಲ. 'ನಿರಂತರ ಪ್ರಯಾಣ' ನನ್ನ ಜೀವನದ ಅವಿಭಾಜ್ಯ ಅಂಗವಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳು, ಸಭೆಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸುತ್ತೇನೆ. ನಾನು ಪುಣೆ, ಮುಂಬೈ, ಬಾರಾಮತಿ, ದೆಹಲಿ ಅಥವಾ ಭಾರತದ ಯಾವುದೇ ಭಾಗದಲ್ಲಿದ್ದರೂ, ನಾನು ಯಾವಾಗಲೂ ನಿಮ್ಮೆಲ್ಲರಿಗೂ ಲಭ್ಯವಿರುತ್ತೇನೆ' ಎಂದು ಪವಾರ್ ಹೇಳಿದ್ದಾರೆ.


ಇದನ್ನೂ ಓದಿ-Naxal Encounter: 38 ಲಕ್ಷ ಬಹುಮಾನ ಘೋಷಿಸಲ್ಪಟ್ಟ ಮೂವರು ನಕ್ಸಲೀಯರ ಎನ್ಕೌಂಟರ್, ಸಿ60 ತಂಡಕ್ಕೆ ಸಿಕ್ಕ ದೊಡ್ಡ ಯಶಸ್ಸು


ಮುಂದಿನ ಪಕ್ಷದ ಮುಖ್ಯಸ್ಥರ ಹೆಸರನ್ನು ನಿರ್ಧರಿಸಲು ಸಮಿತಿ ರಚಿಸಲಾಗಿದೆ
ಪಕ್ಷದ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಯಾರಿಗೆ ನೀಡಬೇಕು ಎಂಬುದನ್ನು ನಿರ್ಧರಿಸಲು ಸಮಿತಿಯನ್ನು ರಚಿಸಲಾಗುವುದು ಎಂದು ಪವಾರ್ ಈ ಸಂದರ್ಭದಲ್ಲಿ ಹೇಳಿದ್ದಾರೆ. ಸಮಿತಿಯಲ್ಲಿ ಸುಪ್ರಿಯಾ ಸುಳೆ, ಅಜಿತ್ ಪವಾರ್, ಪ್ರಫುಲ್ ಪಟೇಲ್, ಜಯಂತ್ ಪಾಟೀಲ್, ಅನಿಲ್ ದೇಶಮುಖ್, ರಾಜೇಶ್ ಟೋಪೆ, ಛಗನ್ ಭುಜಬಲ್ ಸೇರಿದಂತೆ ಹಿರಿಯ ಸದಸ್ಯರು ಇರಬೇಕು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ-Gas Leak Incident: ಲುಧಿಯಾನಾದಲ್ಲಿ ಗ್ಯಾಸ್ ಸೋರಿಕೆಯಿಂದ ದುರ್ಘಟನೆ, 9 ಸಾವು 10 ಜನರಿಗೆ ಗಾಯ


ಎಂವಿಎ ರಚನೆಯಲ್ಲಿ ಮಹತ್ವದ  ಪಾತ್ರ
ನಾಲ್ಕು ಅವಧಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ, ರಕ್ಷಣಾ ಮತ್ತು ಕೇಂದ್ರ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ ಪವಾರ್, 2019 ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ನಂತರ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಲು ಎನ್‌ಸಿಪಿ, ಕಾಂಗ್ರೆಸ್ ಮತ್ತು ಸೈದ್ಧಾಂತಿಕವಾಗಿ ಭಿನ್ನವಾಗಿರುವ ಶಿವಸೇನೆಯನ್ನು ಒಟ್ಟುಗೂಡಿಸುವಲ್ಲಿ ಪವಾರ್ ಮಹತ್ವದ ಪಾತ್ರ ವಹಿಸಿದ್ದರು. ಇದೀಗ ಪವಾರ್ ರಾಜೀನಾಮೆ ಘೋಷಣೆ ಬಳಿಕ ಎಂವಿಎ ಭವಿಷ್ಯದ ಮೇಲೆ ಪ್ರಶ್ನೆ ಉದ್ಭವಿಸಿದೆ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.