ಮುಂಬೈ: ಮಹಾರಾಷ್ಟ್ರ(Maharashtra)ದಲ್ಲಿ ಶನಿವಾರ ಬೆಳಿಗ್ಗೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಎನ್‌ಸಿಪಿ(NCP)ಯ  ಅಜಿತ್ ಪವಾರ್(Ajit pawar) ಬೆಂಬಲದೊಂದಿಗೆ ಬಿಜೆಪಿ ತನ್ನ ಸರ್ಕಾರವನ್ನು ರಚಿಸಿದೆ. ಇದರೊಂದಿಗೆ ದೇವೇಂದ್ರ ಫಡ್ನವೀಸ್(Devendra Fadnavis) ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೆ, ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಗಮನಾರ್ಹ ವಿಷಯವೆಂದರೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಅಜಿತ್ ಪವಾರ್ ಅವರ ಈ ನಿರ್ಧಾರದ ಬಗ್ಗೆ ತಿಳಿದಿರಲಿಲ್ಲ ಎನ್ನಲಾಗಿದೆ. ಅಂದರೆ ಶರದ್ ಪವಾರ್(Sharad Pawar) ಅವರ ಸಮ್ಮತಿಯಿಲ್ಲದೆಯೇ ಅಜಿತ್ ಪವಾರ್ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. 


ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (NCP)ದ ನಿರ್ಧಾರವಲ್ಲ ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ. ಅವರ ನಿರ್ಧಾರವನ್ನು ನಾವು ಬೆಂಬಲಿಸುವುದಿಲ್ಲ ಎಂದು ಹೇಳಲು ನಾವು ಬಯಸುತ್ತೇವೆ ಎಂದು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.