ಕಾಂಗ್ರೆಸ್ ಸೇರುವರೇ ಶತ್ರುಘ್ನ ಸಿನ್ಹಾ!

2019 ಲೋಕಸಭೆ ಚುನಾವಣೆಯಲ್ಲಿ "ಬಿಹಾರಿ ಬಾಬು"ಗೆ ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಿಹಾರಿ ಬಾಬು ಶತ್ರುಘ್ನ ಸಿನ್ಹಾ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

Last Updated : Mar 21, 2019, 06:11 AM IST

Trending Photos

ಕಾಂಗ್ರೆಸ್ ಸೇರುವರೇ ಶತ್ರುಘ್ನ ಸಿನ್ಹಾ! title=
File Image

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್​ಡಿಎ ಸರ್ಕಾರದ ಕಾರ್ಯವೈಖರಿಯನ್ನು ಖಂಡಿಸುತ್ತಿದ್ದ ಬಿಜೆಪಿಯ ರೆಬೆಲ್​ ನಾಯಕ, ಸಂಸದ, ಚಿತ್ರನಟ ಶತ್ರುಘ್ನ ಸಿನ್ಹಾ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

2019 ಲೋಕಸಭೆ ಚುನಾವಣೆಯಲ್ಲಿ "ಬಿಹಾರಿ ಬಾಬು"ಗೆ ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಿಹಾರಿ ಬಾಬು ಶತ್ರುಘ್ನ ಸಿನ್ಹಾ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್​ ವಿರುದ್ಧ ಬಿಹಾರದ ಪಟ್ನಾ ಸಾಹೀಬ್ ಕ್ಷೇತ್ರದ ಕಾಂಗ್ರೆಸ್​ ಹುರಿಯಾಳಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.

ಬಿಜೆಪಿಯ ರೆಬೆಲ್​ ನಾಯಕ ಎಂದು ಗುರುತಿಸಿಕೊಂಡಿರುವ ಶತ್ರುಘ್ನ ಸಿನ್ಹಾ, ಪಕ್ಷಲ್ಲಿದ್ದುಕೊಂಡೇ ಮೋದಿಯವರ ನೋಟು ಅಮಾನ್ಯೀಕರಣ ಹಾಗೂ ಜಿಎಸ್​ಟಿ ಕ್ರಮವನ್ನು ಬಹಿರಂಗವಾಗಿ ಟೀಕಿಸುತ್ತಿದ್ದರು. ತಮ್ಮ ಟೀಕೆಗಳಿಂದಾಗಿ ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದರು. ಆಡ್ವಾಣಿಯನ್ನು ಬಿಜೆಪಿ ನಾಯಕರು ನಡೆಸಿಕೊಂಡ ರೀತಿಗೂ ಸಿನ್ಹಾ ವಾಗ್ದಾಳಿ ನಡೆಸಿದ್ದರು.

2009 ಮತ್ತು 2014ರಲ್ಲಿ ಪಾಟ್ನಾ ಸಾಹಿಬ್​ ಕ್ಷೇತ್ರ ಪ್ರತಿನಿಧಿಸಿದ್ದ ಅವರು, ಈ ಬಾರಿ ಕೂಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಆದರೆ ಬಿಜೆಪಿ ಟಿಕೆಟ್​ ನೀಡುವ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಸೇರುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಪಾಟ್ನಾ ಸಾಹೀಬ್ ಕ್ಷೇತ್ರದಿಂದ ಶತ್ರುಘ್ನ ಸಿನ್ಹಾ ಸ್ಪರ್ಧಿಸಿದರೆ ಅವರನ್ನು ಸೋಲಿಸುವ ಉದ್ದೇಶದಿಂದ ಕಾನೂನು ಸಚಿವ ರವಿಶಂಕರ್​ ಪ್ರಸಾದ್​ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ.
 

Trending News