ಮುಂಬೈ: ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಬಗ್ಗೆ ಯಾವುದೇ ಯಾವುದೇ ನಿರ್ದಿಷ್ಟ ನಿರ್ಧಾರ ಹೊರಬಿದ್ದಿಲ್ಲ. ಬುಧವಾರ, ಮಹಾರಾಷ್ಟ್ರ ಬಿಜೆಪಿ ಮತ್ತೊಮ್ಮೆ ದೇವೇಂದ್ರ ಫಡ್ನವೀಸ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದರೆ, ಇಂದು ಶಿವಸೇನೆ ಶಾಸಕಾಂಗ ಪಕ್ಷದ ಸಭೆ ಸೇರಲಿದೆ. ಈ ಸಭೆಯಲ್ಲಿ ಸರ್ಕಾರ ರಚಿಸುವ ಮತ್ತು ಬಿಜೆಪಿಯೊಂದಿಗೆ ಸರ್ಕಾರ ರಚಿಸದ ಪರಿಸ್ಥಿತಿಯ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ಶಿವಸೇನೆ ಅಧ್ಯಕ್ಷರು ತಮ್ಮ ನಿರ್ಧಾರಕ್ಕೆ (ಅವರು ಸರ್ಕಾರ ಮತ್ತು ಇತರ ಬಣವನ್ನು 50-50ರಂತೆ ಒತ್ತಾಯಿಸಲು ಬಯಸುತ್ತಾರೆ) ಬದ್ಧರಾಗಿರುವುದಾಗಿ ತಿಳಿಸಿದ್ದಾರೆ. ಶಿವಸೇನೆ ಮತ್ತೊಮ್ಮೆ ಬಿಜೆಪಿ ಜೊತೆಗೆ ಮಾತುಕತೆ ನಡೆಸುವ ಸಾಧ್ಯತೆಯೂ ಇದೇ.


ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಅವರ ನೇತೃತ್ವದಲ್ಲಿ ಇಂದು ಶಿವಸೇನೆ ಭವನದಲ್ಲಿ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಶಿವಸೇನಾ ಶಾಸಕಾಂಗ ಪಕ್ಷದ ಮುಖಂಡರಿಗಾಗಿ ಏಕನಾಥ ಶಿಂಧೆ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೇ ಎಂದು ಹೇಳಲಾಗುತ್ತಿದೆ.


ಮೂಲಗಳಿಂದ ಲಭಿಸಿದ ಮಾಹಿತಿ ಪ್ರಕಾರ, ಶಿವಸೇನೆಯ ಈ ಸಭೆ ಬಗ್ಗೆ ಎಲ್ಲರಿಗೂ ಸಾಕಷ್ಟು ಕುತೂಹಲ ಮೂಡಿದ್ದು, ಸಭೆಯಲ್ಲಿ ಕೈಗೊಳ್ಳಲಾಗುವ ನಿರ್ಧಾರದ ಬಳಿಕ ಮುಂದಿನ ಕಾರ್ಯತಂತ್ರದ ಬಗ್ಗೆ ನಿರ್ಧರಿಸಲಾಗುವುದು ಎನ್ನಲಾಗುತ್ತಿದೆ.


ಏತನ್ಮಧ್ಯೆ, ಕಾಂಗ್ರೆಸ್ ಪಕ್ಷದ ನಾಯಕರು ಕೂಡ ಇಂದು ಸಭೆ ಸೇರಲಿದ್ದು, ರಾಜ್ಯದಲ್ಲಿ ಬಿಜೆಪಿ ಅಲ್ಲದ ಸರ್ಕಾರ ರಚಿಸುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.