ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಶಿವಸೇನಾ ಗೈರು
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ನೀಡಿದ ಆಹ್ವಾನವನ್ನು ಶಿವಸೇನಾ ನಯವಾಗಿ ತಿರಸ್ಕರಿಸಿದೆ.
55 ಘಂಟೆಗಳಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬಹುಮತ ವಿಶ್ವಾಸಮತ ಸಾಬೀತುಪಡಿಸದ ಹಿನ್ನಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಈಗ ಹೆಚ್.ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಎಲ್ಲ ಪ್ರಾದೇಶಿಕ ಪಕ್ಷಗಳ ನಾಯಕರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನಿಡಲಾಗಿತ್ತು ಅದರಂತೆ ಮಹಾರಾಷ್ಟ್ರದ ಶಿವಸೇನಾ ಪಕ್ಷಕ್ಕೂ ಕೂಡ ಆಹ್ವಾನ ನೀಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಮುಂಬರುವ ಪಾಲ್ಗಾರ್ ಲೋಕಸಭಾ ಉಪಚುನಾವಣೆಯಲ್ಲಿ ಬ್ಯುಸಿ ಇರುವುದರಿಂದ ನಿರಾಕರಿಸಿದ್ದಾರೆ ಎನ್ನಲಾಗಿದೆ.ಆದರೆ,ನೂತನ ಸರ್ಕಾರಕ್ಕೆ ಶುಭ ಕೋರಿದ್ದಾರೆ ಎಂದು ತಿಳಿದು ಬಂದಿದೆ.