Shocking News: 13 ವರ್ಷದ ಬಾಲಕಿಯ ಮೇಲೆ 80 ಮಂದಿಯಿಂದ 8 ತಿಂಗಳ ಕಾಲ ಅತ್ಯಾಚಾರ!
ಕಳೆದ ವರ್ಷ ಕೋವಿಡ್ -19 ಆಸ್ಪತ್ರೆಯಲ್ಲಿ ಅಪ್ರಾಪ್ತೆಯ ತಾಯಿಯೊಂದಿಗೆ ಸ್ನೇಹ ಬೆಳೆಸಿದ ಮಹಿಳೆಯೊಬ್ಬರು ಬಾಲಕಿಯನ್ನು ದತ್ತು ಪಡೆದುಕೊಂಡಿದ್ದರು.
ಹೈದರಾಬಾದ್: 13 ವರ್ಷದ ಬಾಲಕಿಯನ್ನು 8 ತಿಂಗಳಿಗೂ ಹೆಚ್ಚು ಕಾಲ ವೇಶ್ಯಾವಾಟಿಕೆಗೆ ತಳ್ಳಿ, ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿವಿಧ ವೇಶ್ಯಾವಾಟಿಕೆಗಳಿಗೆ ಕಳುಹಿಸಿ ಅತ್ಯಾಚಾರವೆಸಗಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು 80 ಪುರುಷರು ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ. ಈ ಪೈಕಿ ಕೆಲವರು ಕಿಂಗ್‌ಪಿನ್‌ಗಳು, 35 ಪಿಂಪ್‌ಗಳು ಮತ್ತು ಉಳಿದವರು ಗ್ರಾಹಕರು ಎಂದು ವರದಿಯಾಗಿದೆ.
ಪ್ರಕರಣ ಸಂಬಂಧ ಪೊಲೀಸರು ಮಂಗಳವಾರ ಮತ್ತೆ 10 ಜನರನ್ನು ಬಂಧಿಸಿದ್ದಾರೆ. ಇದರಿಂದ ಒಟ್ಟು ಬಂಧಿತರ ಸಂಖ್ಯೆ 74ಕ್ಕೆ ತಲುಪಿದೆ. ಗುಂಟೂರಿನಲ್ಲಿ ಸಂತ್ರಸ್ತ ಬಾಲಕಿಯನ್ನು ರಕ್ಷಿಸಿದ್ದಾರೆ. ಕಳೆದ ವರ್ಷ ಜೂನ್‌ನಲ್ಲಿ ಕೋವಿಡ್ -19 ಆಸ್ಪತ್ರೆಯಲ್ಲಿ ಬಾಲಕಿಯ ತಾಯಿಯೊಂದಿಗೆ ಸ್ನೇಹ ಬೆಳೆಸಿದ ಮಹಿಳೆಯೊಬ್ಬರು ಅಪ್ರಾಪ್ತೆಯನ್ನು ದತ್ತು ಪಡೆದಿದ್ದರಂತೆ.
ಇದನ್ನೂ ಓದಿ: Viral Video: ಪಂಕ್ಚರ್ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಏನಾಗಿದೆ ನೋಡಿ..!
ಕೋವಿಡ್‌ನಿಂದ ಬಾಲಕಿಯ ತಾಯಿ ತೀರಿಕೊಂಡ ನಂತರ ತಂದೆಗೆ ತಿಳಿಯದಂತೆ ಪ್ರಮುಖ ಆರೋಪಿ ಸ್ವರ್ಣ ಕುಮಾರಿ ಬಾಲಕಿಯನ್ನು ನೋಡಿಕೊಳ್ಳುವ ನೆಪದಲ್ಲಿ ಆಕೆಯನ್ನು ಕರೆದುಕೊಂಡು ಹೋಗಿದ್ದರು. ಬಳಿಕ ಆ ಬಾಲಕಿಯನ್ನು ಆಕೆ ಬಲವಂತದಿಂದ ವೇಶ್ಯಾವಾಟಿಕೆಗೆ ನೂಕಿದ್ದಳು. 2021ರ ಆಗಸ್ಟ್ ತಿಂಗಳಿನಲ್ಲಿ ಬಾಲಕಿಯ ತಂದೆ ದೂರು ನೀಡಿದ ನಂತರ ಪೊಲೀಸರು ಕ್ರಮ ಕೈಗೊಂಡು ಆಕೆಯನ್ನು ಪತ್ತೆಹಚ್ಚಿದ್ದರು. ಈ ಪ್ರಕರಣದಲ್ಲಿ ಇನ್ನೂ 6 ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಜನವರಿಯಲ್ಲಿ ಮೊದಲ ಬಾರಿಗೆ ಆರೋಪಿಗಳನ್ನು ಬಂಧಿಸಲಾಗಿತ್ತು. ಏಪ್ರಿಲ್ 19ರ ಮಂಗಳವಾರ ಗುಂಟೂರು ಪಶ್ಚಿಮ ವಲಯ ಪೊಲೀಸರು ಬಿ.ಟೆಕ್ ವಿದ್ಯಾರ್ಥಿ ಸೇರಿದಂತೆ 10 ಜನರನ್ನು ಬಂಧಿಸಿದ್ದು, ಅಪ್ರಾಪ್ತೆಯನ್ನು ರಕ್ಷಿಸಿದ್ದಾರೆ. ‘ಆರೋಪಿಗಳು ಬಾಲಕಿಯ ವಯಸ್ಸು ಮತ್ತು ಪರಿಸ್ಥಿತಿಯ ಲಾಭ ಪಡೆದುಕೊಂಡು ತೆಲುಗು ರಾಜ್ಯಗಳ ಹಲವಾರು ಸ್ಥಳಗಳಿಗೆ ಕರೆದೊಯ್ದು ಬಲವಂತವಾಗಿ ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದರು’ ಎಂದು ಗುಂಟೂರಿನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಸುಪ್ರಜಾ ತಿಳಿಸಿದ್ದಾರೆ.
ಇದನ್ನೂ ಓದಿ: Teacher with Gun: ಶಿಕ್ಷಕಿಯ ಬಳಿಯಿಂದ ದೇಸಿ ಪಿಸ್ತೂಲ್ ವಶಕ್ಕೆ ಪಡೆದ ಪೊಲೀಸರು, Video ನೋಡಿ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.