Shopian Encounter: ಜಮ್ಮು ಮತ್ತು ಕಾಶ್ಮೀರದ (Jammu-Kashmir) ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಉತ್ತಮ ಯಶಸ್ಸನ್ನು ಸಾಧಿಸಿವೆ.  ಅಕ್ಟೋಬರ್ 20, 2021 ಬುಧವಾರದಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಶೋಪಿಯಾನ್‌ನಲ್ಲಿ  ಎನ್‌ಕೌಂಟರ್‌:
ಜಮ್ಮು ಮತ್ತು ಕಾಶ್ಮೀರದ (Jammu-Kashmir) ಶೋಪಿಯಾನ್‌ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು, ಶೋಧ ಕಾರ್ಯಾಚರಣೆ ಆರಂಭಿಸಿದ ಭದ್ರತಾ ಪಡೆ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದಿವೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 


ಇದನ್ನೂ ಓದಿ- Goa: ಗೋವಾ ಶ್ರೀಮಂತ ಪ್ರವಾಸಿಗರನ್ನು ಬಯಸುತ್ತದೆ, ಬಸ್‌ಗಳಲ್ಲಿ ಅಡುಗೆ ಮಾಡುವವರನ್ನಲ್ಲ- ಪ್ರವಾಸೋದ್ಯಮ ಸಚಿವ


ಶೋಪಿಯಾನ್‌ನಲ್ಲಿ  ಎನ್‌ಕೌಂಟರ್‌ ಕುರಿತಂತೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು 
ಶೋಪಿಯಾನ್ ಜಿಲ್ಲೆಯ ಡ್ರಗಡ್ ಗ್ರಾಮದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಹಿನ್ನಲೆಯಲ್ಲಿ ಸ್ಥಳವನ್ನು ಸುತ್ತುವರೆಯಲಾಯಿತು. ಈ ಸಂದರ್ಭದಲ್ಲಿ ಭಯೋತ್ಪಾದಕರನ್ನು ಶರಣಾಗುವಂತೆ ಕೇಳಲಾಯಿತು. ಇದಕ್ಕೊಪ್ಪದ ಉಗ್ರರು ಭದ್ರತಾ ಪಡೆಗಳ (Security Forces)  ಮೇಲೆ ಗುಂಡಿನ ಸುರಿಮಳೆಗೈದರು ಎಂದರು. 


ಇದನ್ನೂ ಓದಿ- Medicine For Dengue Fever: ಕೊನೆಗೂ ಸಿಕ್ಕೆ ಬಿಟ್ತು ಡೆಂಗ್ಯೂ ಜ್ವರಕ್ಕೆ ಔಷಧಿ, ದೇಶದ ಈ 20 ಸ್ಥಳಗಳಲ್ಲಿ ನಡೆಯಲಿದೆ ಟ್ರಯಲ್


ಭಯೋತ್ಪಾದಕರ ಗುಂಡಿನ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿದ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರ ಗುರುತು ಇನ್ನೂ ಪತ್ತೆ ಆಗಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ