Parliament attack: ಪುತ್ರನನ್ನು ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಷಡ್ಯಂತ್ರ!

Parliament smoke attack case: ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹೀಗಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಲೇಹರ್ ಸಿಂಗ್ ಹೇಳಿದ್ದಾರೆ.

Written by - Puttaraj K Alur | Last Updated : Dec 16, 2023, 03:27 PM IST
  • ಸಿಎಂ ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ
  • ಹೀಗಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ಮಾಡಲಾಗಿದೆ
  • ಸಿದ್ದರಾಮಯ್ಯ ‘ಅರ್ಬನ್ ನಕ್ಸಲ’ರನ್ನು ಬೆಳೆಸುತ್ತಿದ್ದಾರೆಂದು ಆರೋಪಿಸಿದ ಲೇಹರ್ ಸಿಂಗ್
Parliament attack: ಪುತ್ರನನ್ನು ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಷಡ್ಯಂತ್ರ!  title=
ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ

ನವದೆಹಲಿ: ನೂತನ ಸಂಸತ್‌ ಭವನದಲ್ಲಿ ಕಿಡಿಗೇಡಿಗಳು ಬಣ್ಣಮಿಶ್ರಿತ ಹೊಗೆ ದಾಳಿ ನಡೆಸಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡಿರುವ ಲೇಹರ್ ಸಿಂಗ್, ‘ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ‘ಅರ್ಬನ್ ನಕ್ಸಲ’ರನ್ನು ಬೆಳೆಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹೀಗಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ಮಾಡಲಾಗಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ವಿರೋಧ ಪಕ್ಷದ ನಾಯಕನ ಕೊರತೆ ಕಾಣುತ್ತಿತ್ತು : ಸಲೀಂ ಅಹಮದ್

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಅರ್ಬನ್ ನಕ್ಸಲರು ಭಾಗಿಯಾಗಿದ್ದರು. ಈ ಬಗ್ಗೆ ನಾನು ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯರಿಗೆ ಪತ್ರವನ್ನು ಬರೆದಿದ್ದೆ. ಸಿದ್ದರಾಮಯ್ಯನವರು ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ. ಮಗನನ್ನು ಗೆಲ್ಲಿಸಲು ಷಡ್ಯಂತ್ರ ರೂಪಿಸಿದ್ದಾರೆ’ ಅಂತಾ ಕಿಡಿಕಾರಿದ್ದಾರೆ.

ಕಲಾಪದ ವೇಳೆ ಸಂಸತ್ ಭದ್ರತಾ ಲೋಪವಾದ ಕೆಲವೇ ನಿಮಿಷಗಳಲ್ಲಿ ಕಾಂಗ್ರೆಸ್‍ನವರು ಪ್ರತಿಭಟನೆ ನಡೆಸಿದ್ದಾರೆ. ಘಟನೆಯಾದ ಕೆಲವೇ ನಿಮಿಷಗಳಲ್ಲಿ ಪ್ರತಿಭಟನೆ ನಡೆಸಲು ಹೇಗೆ ಸಾಧ್ಯ? ಹೀಗಾಗಿ ಇದು ಪೂರ್ವನಿಯೋಜಿತ ಕೃತ್ಯ. ಸಂಸದ ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗಿದೆ. ಈ ಘಟನೆ ಕಾಂಗ್ರೆಸ್ ಪಕ್ಷದ ಮೂರ್ಖತನದಿಂದ ಆಗಿದೆ. ಈ ಪ್ರಕರಣದ ತನಿಖೆಗೆ ಎಲ್ಲರೂ ಕೈಜೋಡಿಸಬೇಕು. ಪಕ್ಷಭೇದ ಮರೆತು ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ತನಿಖೆಗೆ ಸಹಕರಿಸಬೇಕು. ಇದರಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!

ಹೊಗೆ ದಾಳಿ ಪ್ರಕರಣದ ಇಬ್ಬರು ಆರೋಪಿಗಳಿಗೆ ಲೋಕಸಭೆ ಕಲಾಪಕ್ಕೆ ಹಾಜರಾಗಲು ಪಾಸ್ ನೀಡಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದಾರೆ. ಆರೋಪಿ ಮನೋರಂಜನ್ ಡಿ ಜೊತೆ ಪ್ರತಾಪ್ ಸಿಂಹ ನಿಕಟ ಸಂಪರ್ಕ ಹೊಂದಿದ್ದಾರೆ ಎಂದೂ ಪಕ್ಷವು ಆರೋಪಿಸುತ್ತಿದೆ. ಅವರ ಕಚೇರಿಯನ್ನು ಜಪ್ತಿ ಮಾಡಬೇಕು ಮತ್ತು ಅವರನ್ನು ಅಮಾನತುಗೊಳಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಕರ್ನಾಟಕ ಕಾಂಗ್ರೆಸ್ ಕೂಡ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಈ ವಿಷಯದಲ್ಲಿ ಅವರ ನಿಷ್ಕ್ರಿಯತೆ ವಿರುದ್ಧ ಕಿಡಿಕಾರಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News