ಬೆಂಗಳೂರು: ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾಗಾಗಿ ನಡೆದ ಉಪಚುನಾವಣೆಯಲ್ಲಿ ಶಿವಮೊಗ್ಗವೊಂದು ಕ್ಷೇತ್ರವೊಂದು ಬಿಜೆಪಿ ಪಾಲಾಗಿದ್ದು ಬಿಟ್ಟರೆ ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು  ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅದರಲ್ಲೂ ಬಿಜೆಪಿಯ ಭದ್ರಕೋಟೆಯಾಗಿದ್ದ ಬಳ್ಳಾರಿ ಕ್ಷೇತ್ರವು ಕಾಂಗ್ರೆಸ್ ಪಾಲಾಗುವುದರ ಮೂಲಕ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ.



COMMERCIAL BREAK
SCROLL TO CONTINUE READING

ಈಗ ಉಪಚುನಾವಣೆ ಫಲಿತಾಂಶದ ಕುರಿತಾಗಿ  ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ " ಬಳ್ಳಾರಿಯ ಜನತಾ ಜನಾರ್ಧನರಿಗೆ ಧನ್ಯವಾದಗಳು.ಜನಾರ್ಧನ ರೆಡ್ಡಿಯವರ ಅಮಾನವೀಯ ನಡೆ-ನುಡಿಗೆ ಬಳ್ಳಾರಿ ಜನರೇ ಶಾಪ ನೀಡಿದ್ದಾರೆ ಎಂದು ಟ್ವೀಟ್  ಮಾಡಿದ್ದಾರೆ.ಭಾರತೀಯ ಜನತಾ ಪಕ್ಷದ ಸೋಲಿನ ಸರಮಾಲೆ ಪ್ರಾರಂಭವಾಗಿದೆ,
ಇದು ೨೦೧೯ರ ಲೋಕಸಭಾ ಚುನಾವಣೆಯಲ್ಲಿಯೂ ಮುಂದುವರಿಯಲಿದೆ.ರಾಜ್ಯದ‌ ಮತದಾರರು ನಿರ್ಧರಿಸಿ‌ ಆಗಿದೆ ಎಂದು ಅವರು ತಿಳಿಸಿದ್ದಾರೆ.



ಇನ್ನೊಂದು  ಟ್ವೀಟ್ ನಲ್ಲಿ ಸಿದ್ದರಾಮಯ್ಯ "ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ.ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ.ನಾಡಬಾಂಧವರಿಗೆ ದೀಪಾವಳಿಯ ಶುಭಾಶಯಗಳು ಎಂದು ಶುಭಕೋರಿದ್ದಾರೆ.