ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು : ನವಜೋತ್ ಸಿಂಗ್ ಸಿಧು ಮನವೊಲಿಕೆಯ ಜವಾಬ್ದಾರಿ ಸಿಎಂ ಚರಣ್ ಜೀತ್ ಹೆಗಲಿಗೆ
ಮೂಲಗಳ ಪ್ರಕಾರ, ಕಾಂಗ್ರೆಸ್ ಹೈಕಮಾಂಡ್ ಪಂಜಾಬ್ ನಲ್ಲಿನ ವಿವಾದಗಳನ್ನು ಸಮಾಧಾನಪಡಿಸಲು ಸಿದ್ದು ಮನವೊಲಿಸುವ ಪ್ರಯತ್ನ ಆರಂಭಿಸಿದೆ.
ಚಂಡೀಗಢ : ಪಂಜಾಬ್ ಕಾಂಗ್ರೆಸ್ (Congress) ನಾಯಕರ ನಡುವೆ ಭುಗಿಲೆದ್ದಿರುವ ಅಸಮಾಧಾನವನ್ನು ಶಮನ ಮಾಡುವ ಎಲ್ಲಾ ಪ್ರಯತ್ನಗಳನ್ನು ಪಕ್ಷ ತೀವ್ರಗೊಳಿಸಿದೆ. ಮೂಲಗಳ ಪ್ರಕಾರ, ಪಕ್ಷದ ಹೈಕಮಾಂಡ್ ನವಜೋತ್ ಸಿಂಗ್ ಸಿಧು ಅವರ ರಾಜೀನಾಮೆಯನ್ನು ಸ್ವೀಕರಿಸದಿರಲು ನಿರ್ಧರಿಸಿದೆ. ಅಲ್ಲದೆ, ನವಜೋತ್ ಸಿಂಗ್ ಸಿಧು (Navjot Singh Sidhu) ಅವರೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುತ್ತಾರೆಎಂದು ಹೇಳಿದೆ ಎನ್ನಲಾಗಿದೆ .
ಸಿಧು ಮನವೊಲಿಸುವ ಜವಾಬ್ದಾರಿಯನ್ನು ಸಿಎಂ ಮೇಲೆ :
ಮೂಲಗಳ ಪ್ರಕಾರ, ಕಾಂಗ್ರೆಸ್ ಹೈಕಮಾಂಡ್ (Congress high command) ಪಂಜಾಬ್ ನಲ್ಲಿನ ವಿವಾದಗಳನ್ನು ಸಮಾಧಾನಪಡಿಸಲು ಸಿದ್ದು (Navjot Singh Sidhu) ಮನವೊಲಿಸುವ ಪ್ರಯತ್ನ ಆರಂಭಿಸಿದೆ. ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುವ ಕೆಲಸವನ್ನು ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಗೆ ವಹಿಸಲಾಗಿದೆ. ಈ ಘಟನೆಯ ಕುರಿತು ಇದುವರೆಗೂ ಸಿದ್ದು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇದನ್ನೂ ಓದಿ : Suryoday Bank : ಬ್ಯಾಂಕ್ ಗ್ರಾಹಕರೇ ಗಮನಿಸಿ : ಅಕ್ಟೋಬರ್ 1 ರಿಂದ ದೇಶದಲ್ಲಿ ಬಂದ್ ಆಗಲಿದೆ ಈ ಬ್ಯಾಂಕ್ ATM
ಸೋನಿಯಾಗೆ ಪತ್ರ ಬರೆದ ಗುಲಾಂ ನಬಿ ಆಜಾದ್ :
ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ (Ghulam Nabi Azad) ಅವರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, ಸದ್ಯದ ಪರಿಸ್ಥಿತಿಯನ್ನು ಚರ್ಚಿಸಲು ಪಕ್ಷದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ತಕ್ಷಣವೇ ಕರೆಯುವಂತೆ ಒತ್ತಾಯಿಸಿದ್ದಾರೆ. ಪಕ್ಷದ ನಾಯಕರು ಒಟ್ಟಾಗಿ ಕುಳಿತು ಈ ಸಮಸ್ಯೆಯನ್ನು ಸಕಾರಾತ್ಮಕ ರೀತಿಯಲ್ಲಿ ಪರಿಹರಿಸಬೇಕು ಎಂದು ಅವರು ಹೇಳಿದ್ದಾರೆ.
ಪಕ್ಷದಲ್ಲಿ ಚುನಾವಣೆಗೆ ಬೇಡಿಕೆ ಇಟ್ಟ ಕಪಿಲ್ ಸಿಬಲ್ :
ಇದಕ್ಕೂ ಮುನ್ನ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಕಪಿಲ್ ಸಿಬಲ್ (Kapil Sibal) ಬುಧವಾರ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಕಾಂಗ್ರೆಸ್ ನಾಯಕತ್ವದ ಮೇಲೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಸಮಯದಲ್ಲಿ ಪಕ್ಷದಲ್ಲಿ ಯಾವುದೇ ಅಧ್ಯಕ್ಷರಿಲ್ಲ ಎನ್ನುವ ಬಗ್ಗೆಯೂ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. ಪಕ್ಷಕ್ಕೆ ಸಂಬಂಧಿಸಿದ ಎಲ್ಲ ಪ್ರಮುಖ ನಿರ್ಧಾರಗಳನ್ನು ಯಾರು ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ಬಗ್ಗೆಯೂ ಆರು ಪ್ರಶ್ನಿಸಿದ್ದಾರೆ. ಪಕ್ಷದಲ್ಲಿ ಸುಧಾರಣೆಗಳಿಗಾಗಿ ನಾವು ಕಳೆದ ವರ್ಷ ಆಗಸ್ಟ್‌ನಲ್ಲಿ ಹೈಕಮಾಂಡ್‌ಗೆ ಪತ್ರ ಬರೆದಿದ್ದೇವೆ, ಆದರೆ ಇದುವರೆಗೆ ಯಾವುದೇ ಉತ್ತರ ಬಂದಿಲ್ಲ ಎಂದು ಕೂಡಾ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : Amazon ನಲ್ಲಿ ಆಫರ್ ಗಳ ಸುರಿಮಳೆ, ಸ್ಯಾಮ್ ಸಂಗ್ ನ ಈ ಫೋನ್ ಮೇಲೆ ಸಿಗಲಿದೆ 30 ಸಾವಿರಕ್ಕಿಂತ ಅಧಿಕ ರಿಯಾಯಿತಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.