ಮೋದಿ 3.0 ನೂತನ ಕ್ಯಾಬಿನೆಟ್ ನಲ್ಲಿದ್ದಾರೆ ಆರು ಮಾಜಿ ಮುಖ್ಯಮಂತ್ರಿಗಳು...!

ಇಂದು 71 ಸಚಿವ ಸಂಪುಟದ ಮುಖ್ಯಸ್ಥರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸಂಪುಟದಲ್ಲಿ ಆರು ಮಾಜಿ ಮುಖ್ಯಮಂತ್ರಿಗಳಿಗೆ ಸಚಿವ ಸ್ಥಾನದ ಅವಕಾಶ ನೀಡಲಾಗಿದೆ.

Written by - Manjunath N | Last Updated : Jun 9, 2024, 10:23 PM IST
  • ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 9000 ಅತಿಥಿಗಳು ಉಪಸ್ಥಿತರಿದ್ದರು.
  • ಪ್ರಧಾನಿಯಾಗುವ ಮೊದಲು ಪ್ರಧಾನಿ ಮೋದಿ ಸಹ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.
 ಮೋದಿ 3.0 ನೂತನ ಕ್ಯಾಬಿನೆಟ್ ನಲ್ಲಿದ್ದಾರೆ ಆರು ಮಾಜಿ ಮುಖ್ಯಮಂತ್ರಿಗಳು...! title=

ನವದೆಹಲಿ: ಇಂದು 71 ಸಚಿವ ಸಂಪುಟದ ಮುಖ್ಯಸ್ಥರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸಂಪುಟದಲ್ಲಿ ಆರು ಮಾಜಿ ಮುಖ್ಯಮಂತ್ರಿಗಳಿಗೆ ಸಚಿವ ಸ್ಥಾನದ ಅವಕಾಶ ನೀಡಲಾಗಿದೆ.

30 ಕ್ಯಾಬಿನೆಟ್ ಮಂತ್ರಿಗಳ ಸಚಿವ ಸಂಪುಟದಲ್ಲಿ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿನ್ ಚೌಹಾಣ್,  ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ರಾಜನಾಥ್ ಸಿಂಗ್ ಮತ್ತು ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಸೇರಿದ್ದಾರೆ. ಎನ್‌ಡಿಎ ಮಿತ್ರಪಕ್ಷಗಳಲ್ಲಿ ಜಿತನ್ ರಾಮ್ ಮಾಂಝಿ ಮತ್ತು ಎಚ್‌ಡಿ ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ, ಅವರು ಅಲ್ಪಾವಧಿಗೆ ಬಿಹಾರ ಮತ್ತು ಕರ್ನಾಟಕವನ್ನು ಮುನ್ನಡೆಸಿದ್ದರು.ಪ್ರಧಾನಿಯಾಗುವ ಮೊದಲು ಪ್ರಧಾನಿ ಮೋದಿ ಸಹ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

ಇದನ್ನೂ ಓದಿ: ಉತ್ತರ- ದಕ್ಷಿಣ ಕರ್ನಾಟಕ ಲಿಂಗಾಯತರ ಸಂಘಟನೆ ಅಗತ್ಯ: ಎಂ ಬಿ ಪಾಟೀಲ

ಪ್ರಧಾನಿ ಮೋದಿಯವರು ನಿರಂತರತೆ ಮತ್ತು ಅನುಭವಕ್ಕೆ ಒತ್ತು ನೀಡಿರುವುದನ್ನು ಸೂಚಿಸುವ ಮೂಲಕ, ಸಂಪುಟದ ಹಿರಿಯ ಶ್ರೇಣಿಯಲ್ಲಿ ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್, ಪಿಯೂಷ್ ಗೋಯಲ್, ಜ್ಯೋತಿರಾದಿತ್ಯ ಸಿಂಧಿಯಾ, ಧರ್ಮೇಂದ್ರ ಪ್ರಧಾನ್, ಭೂಪೇಂದರ್ ಯಾದವ್, ಅಶ್ವಿನಿ ವೈಷ್ಣವ್, ಪ್ರಲ್ಹಾದ್ ಸಿಂಗ್, ಮತ್ತು ಪ್ರಲ್ಹಾದ್ ಜೊಶಿಗೆ ಮನ್ನಣೆ ನೀಡಲಾಗಿದೆ.

ಇದನ್ನು ಓದಿ : ಕಿಡ್ನಿಸ್ಟೋನ್’ಗೆ ಸಂಜೀವಿನಿ ಇದ್ದಂತೆ ಈ ಗಿಡದಲ್ಲಿ ಶೇಖರಣೆಯಾದ ನೀರು! ಸೇವಿಸಿದ ತಕ್ಷಣ ಕಲ್ಲು ಪುಡಿಯಾಗಿ ಮೂತ್ರಕೋಶದಿಂದ ಹೊರಬರುತ್ತೆ!

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ನೆರೆ ರಾಷ್ಟ್ರಗಳಾದ ಮಾಲ್ಡೀವ್ಸ್ ನ ಅಧ್ಯಕ್ಷ ಮೊಹಮ್ಮದ್ ಮುಯಿಝು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ 'ಪ್ರಚಂಡ', ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ಭೂತಾನ್ ಪ್ರಧಾನಿ ತ್ಶೇರಿಂಗ್ ಮತ್ತು ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್ ಅವರು ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿದ್ದರು. 

ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಟಿಡಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News