ಬಿಹಾರದ ಮುಜಾಫರ್‌ಪುರದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, ಕನಿಷ್ಠ 6 ಕಾರ್ಮಿಕರು ಸಾವು
ಬಿಹಾರದ ಮುಜಾಫರ್‌ಪುರ ಜಿಲ್ಲೆಯ ನೂಡಲ್ ತಯಾರಿಕಾ ಕಾರ್ಖಾನೆಯ ಬಾಯ್ಲರ್‌ಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನವದೆಹಲಿ: ಬಿಹಾರದ ಮುಜಾಫರ್‌ಪುರ ಜಿಲ್ಲೆಯ ನೂಡಲ್ ತಯಾರಿಕಾ ಕಾರ್ಖಾನೆಯ ಬಾಯ್ಲರ್‌ಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಫೋಟವು ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ ಮತ್ತು ಅದರ ಶಬ್ದವು ಸ್ಥಳದಿಂದ 5 ಕಿಮೀ ದೂರದಲ್ಲಿ ಕೇಳಿಸಿತು.
ಇದನ್ನೂ ಓದಿ: Test Ride ಜಂಜಾಟವಿಲ್ಲ, RTOಗೆ ಭೇಟಿ ನೀಡುವ ಅಗತ್ಯವಿಲ್ಲ.. ಈ ಒಂದು ಪ್ರಮಾಣಪತ್ರ ಇದ್ದರೆ ಸಾಕು ಸಿಗುತ್ತೆ Driving License
ಸ್ಫೋಟದ ಪರಿಣಾಮದಿಂದ ಪಕ್ಕದ ಹಿಟ್ಟಿನ ಗಿರಣಿ ಕೂಡ ಧ್ವಂಸಗೊಂಡಿದ್ದು, ಒಳಗೆ ಮಲಗಿದ್ದ ಇಬ್ಬರು ಕಾರ್ಮಿಕರಿಗೂ ಗಾಯಗಳಾಗಿವೆ. ಈ ಬೆಳವಣಿಗೆಯನ್ನು ದೃಢಪಡಿಸಿದ ಜಿಲ್ಲಾಧಿಕಾರಿ ಪ್ರಣವ್ ಕುಮಾರ್ ಅವರು ಈ ಹಿಂದೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ''ಮುಜಾಫರ್‌ಪುರದ ನೂಡಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಹೇಳಿದರು.
ಆದಾಗ್ಯೂ, ಸಾವಿನ ಸಂಖ್ಯೆ ನಂತರ ಆರಕ್ಕೆ ಏರಿತು ಎಂದು ಮುಜಫರ್‌ಪುರ ಮ್ಯಾಜಿಸ್ಟ್ರೇಟ್ ಪ್ರಣವ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಖಚಿತಪಡಿಸಿದರು.
ಇದನ್ನೂ ಓದಿ: ಸ್ನ್ಯಾಕ್ಸ್ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟ: ಐವರು ಸಾವು, 6 ಮಂದಿಗೆ ಗಾಯ
ಕಾರ್ಖಾನೆಯು ಮುಜಾಫರ್‌ಪುರದ ಬೇಲಾ ಕೈಗಾರಿಕಾ ಪ್ರದೇಶದಲ್ಲಿದೆ. ಅವಶೇಷಗಳನ್ನು ತೆಗೆದುಹಾಕಲು ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಕಾರ್ಖಾನೆಯೊಳಗೆ 10 ಕ್ಕೂ ಹೆಚ್ಚು ಮೃತದೇಹಗಳು ಸಿಲುಕಿಕೊಂಡಿವೆ ಎಂದು ಮೂಲಗಳು ತಿಳಿಸಿವೆ.ಘಟನಾ ಸ್ಥಳಕ್ಕೆ ಮೊದಲು ಭೇಟಿ ನೀಡಿದ ಮುಜಾಫರ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಯಂತ್ ಕಾಂತ್, "ನಾವು ಇದುವರೆಗೆ ಆರು ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆದಿದ್ದೇವೆ, ಅಲ್ಲದೆ, ಐವರಿಗೆ ಗಾಯಗಳಾಗಿದ್ದು, ಅವರನ್ನು ಶ್ರೀಕೃಷ್ಣ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
"ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಅವಶೇಷಗಳನ್ನು ತೆಗೆದುಹಾಕುತ್ತಿದ್ದಾರೆ. ಸಾವಿನ ನಿಖರ ಸಂಖ್ಯೆಯನ್ನು ಇನ್ನೂ ಖಚಿತಪಡಿಸಲಾಗಿಲ್ಲ," ಎಂದು ಅವರು ಹೇಳಿದರು.
ಏತನ್ಮಧ್ಯೆ, ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮುಜಾಫರ್‌ಪುರ ಜಿಲ್ಲೆಯ ಖಾಸಗಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಘಟನೆಯಲ್ಲಿ ಗಾಯಗೊಂಡವರಿಗೆ ಸಹಾಯ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಪೊಲೀಸರಿಂದ ವಿವರವಾದ ವರದಿಯನ್ನು ಕೇಳಿದ್ದಾರೆ.
ಇದನ್ನೂ ಓದಿ: WATCH:ದೈತ್ಯ ಹಾವಿನೊಂದಿಗೆ ಆಟ, ಭಯಾನಕ ವಿಡಿಯೋ ವೈರಲ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.