Maharashtra fire accident : ಮಹಾರಾಷ್ಟ್ರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಹ್ಯಾಂಡ್ ಗ್ಲೌಸ್ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಆರು ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಅಲ್ಲದೆ, ಹಲವರು ಗಾಯಗೊಂಡಿದ್ದಾರೆ. ಔರಂಗಾಬಾದ್ ಸಮೀಪದ ವಾಲುಜ್ ಛತ್ರಪತಿ ಶಂಭಾಜಿನಗರದಲ್ಲಿ ಭಾನುವಾರ ಬೆಳಗಿನ ಜಾವ 2.15ಕ್ಕೆ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದರು. 


COMMERCIAL BREAK
SCROLL TO CONTINUE READING

ಬೆಂಕಿ ಅವಘಡ ಸಂಭವಿಸಿದ ಸನ್‌ ಶೈನ್ ಎಂಟರ್‌ಪ್ರೈಸಸ್ ಹ್ಯಾಂಡ್ ಗ್ಲೋವ್ಸ್ ಫ್ಯಾಕ್ಟರಿಯಲ್ಲಿ ಸುಮಾರು 25 ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಹತ್ತರಿಂದ ಹದಿನೈದು ನೌಕರರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರೆಲ್ಲರೂ ಮಲಗಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಕೆಲವರು ಬೆಂಕಿಯನ್ನು ಗಮನಿಸಿ ಪರಾರಿಯಾಗಿದ್ದಾರೆ.


ಕೃತಿಸ್ವಾಮ್ಯ ಕಾನೂನು ದಿನ 2024ರ ಬಗ್ಗೆ ನಿಮಗೆ ಗೊತ್ತಿದೆಯೇ? ಹಕ್ಕುಸ್ವಾಮ್ಯ ಪ್ರಾಮುಖ್ಯತೆ ತಿಳಿಯಿರಿ!


ಮಾಹಿತಿ ಪಡೆದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ನಾಲ್ಕು ಗಂಟೆಗಳ ಕಾಲ ಶ್ರಮಿಸಿ ಬೆಂಕಿ ನಂದಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರ ವಿವರ ಮತ್ತು ಘಟನೆಗೆ ಕಾರಣ ತಿಳಿದುಬಂದಿಲ್ಲ. ಆದರೆ, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.