ನವದೆಹಲಿ: ಕೇಂದ್ರ ಸಚಿವ ಸಂಪುಟಕ್ಕೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಉಕ್ಕು ಸಚಿವ ಆರ್‌ಸಿಪಿ ಸಿಂಗ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ಅಂಗೀಕರಿಸಿದ್ದಾರೆ.


COMMERCIAL BREAK
SCROLL TO CONTINUE READING

ಈಗ ಅವರ ಸಚಿವ ಸ್ಥಾನಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಉಕ್ಕಿನ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.


ಇದನ್ನೂ ಓದಿ: 'ನಾನು ಕನ್ನಡ ಮರೆತಿಲ್ಲ..ತೆಲುಗು ಸೆಟ್‌ನಲ್ಲೂ ಕೂಡಾ ಕನ್ನಡ ಮಾತನಾಡುತ್ತೇನೆ'


"ಪ್ರಧಾನಿ ಅವರ ಸಲಹೆಯಂತೆ, ಕ್ಯಾಬಿನೆಟ್ ಸಚಿವೆ ಶ್ರೀಮತಿ ಸ್ಮೃತಿ ಜುಬಿನ್ ಇರಾನಿ ಅವರಿಗೆ ಹಾಲಿ ಇರುವ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಉಸ್ತುವಾರಿಯನ್ನು ನಿಯೋಜಿಸಲು ರಾಷ್ಟ್ರಪತಿಗಳು ಸೂಚಿಸಿದ್ದಾರೆ" ಎಂದು ರಾಷ್ಟ್ರಪತಿ ಭವನದ ಅಧಿಸೂಚನೆ ತಿಳಿಸಿದೆ.


ಇದನ್ನೂ ಓದಿ: ಬಾಲಿವುಡ್‌ಗೆ ಹಾರಲಿದೆ 'ರಂಗಿತರಂಗ'..! ಕನ್ನಡ ಸಿನಿಮಾದಲ್ಲಿ ಅಕ್ಷಯ್‌ ಹೀರೋ..?


"ಇದಲ್ಲದೆ, ಪ್ರಧಾನ ಮಂತ್ರಿಯ ಸಲಹೆಯಂತೆ, ಕ್ಯಾಬಿನೆಟ್ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರಿಗೆ ಪ್ರಸ್ತುತ ಇರುವ ಖಾತೆಗೆ ಹೆಚ್ಚುವರಿಯಾಗಿ ಉಕ್ಕು ಸಚಿವಾಲಯದ ಉಸ್ತುವಾರಿಯನ್ನು ನಿಯೋಜಿಸಲು ರಾಷ್ಟ್ರಪತಿಗಳು ಸೂಚಿಸಿದ್ದಾರೆ" ಎಂದು ಅಧಿಸೂಚನೆ ಉಲ್ಲೇಖಿಸಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ