ಹತ್ಯೆಯಾದ ಸುರೇಂದ್ರ ಸಿಂಗ್ ನಿವಾಸಕ್ಕೆ ತೆರಳಿದ ಬಿಜೆಪಿ ಸಂಸದೆ ಸ್ಮೃತಿ ಇರಾನಿ
ಅಮೇಥಿ ಜಿಲ್ಲೆಯ ಬರೌಲಿಯಾ ಗ್ರಾಮದ ಮುಖಂಡ ಸುರೇಂದ್ರ ಸಿಂಗ್(50) ಎಂಬುವರನ್ನು ಶನಿವಾರ ತಡರಾತ್ರಿ 3 ಗಂಟೆಯಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದರು.
ನವದೆಹಲಿ: ಶನಿವಾರ ತಡ ರಾತ್ರಿ ಅಮೇಥಿಯಲ್ಲಿ ಬರ್ಬರವಾಗಿ ಕೊಎಲ್ಯಾದ ಬಿಜೆಪಿ ಕಾರ್ಯಕರ್ತ ಸುರೇಂದ್ರ ಸಿಂಗ್ ಕುಟುಂಬವನ್ನು ಭೇಟಿ ಮಾಡಲು ಬಿಜೆಪಿ ಸಂಸದೆ ಸ್ಮೃತಿ ಇರಾನಿ ದೆಹಲಿಯಿಂದ ತೆರಳಿದ್ದಾರೆ.
ಅಮೇಥಿ ಜಿಲ್ಲೆಯ ಬರೌಲಿಯಾ ಗ್ರಾಮದ ಮುಖಂಡ ಸುರೇಂದ್ರ ಸಿಂಗ್(50) ಎಂಬುವರನ್ನು ಶನಿವಾರ ತಡರಾತ್ರಿ 3 ಗಂಟೆಯಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದರು. ಸ್ಮೃತಿ ಇರಾನಿ ಅವರ ಗೆಲುವಿನ ಸಂಭ್ರಮಾಚರಣೆಗೆ ತೆರಳಿ ಮನೆಗೆ ವಾಪಾಸಾಗಿ ಹೊರಗೆ ಮಲಗಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ದಯಾ ರಾಮ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸ್ಮೃತಿ ಇರಾನಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಭರ್ಜರಿ ಜಯ ಗಳಿಸಿದ್ದರು.