ಅಮೇಥಿ: ಉತ್ತರಪ್ರದೇಶದ ಅಮೇಥಿಯಲ್ಲಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ಆಪ್ತನನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಅಮೇಥಿ ಜಿಲ್ಲೆಯ ಬರೌಲಿಯಾ ಗ್ರಾಮದ ಮುಖಂಡ ಸುರೇಂದ್ರ ಸಿಂಗ್(50) ಎಂಬುವರನ್ನು ಶನಿವಾರ ರಾತ್ರಿ 11.30ರಲ್ಲಿ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ದಯಾ ರಾಮ್ ಹೇಳಿದ್ದಾರೆ.


ಸ್ಮೃತಿ ಇರಾನಿ ಅವರ ಗೆಲುವಿನ ಸಂಭ್ರಮಾಚರಣೆಗೆ ತೆರಳಿ ಮನೆಗೆ ವಾಪಾಸಾಗಿ ಮನೆಯ ಹೊರಗೆ ಮಲಗಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಿದ್ದ ಸ್ಮೃತಿ ಇರಾನಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ವಿರುದ್ಧ ಭರ್ಜರಿ ಜಯ ಗಳಿಸಿದ್ದರು.