ಪಾಟ್ನಾ : ಮಧ್ಯಾಹ್ನದ ಊಟ ಸೇವಿಸಿ ಹಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬೆಸ್‌ಗಂಜ್ ಸರ್ಕಾರಿ ಶಾಲೆಯಲ್ಲಿ ಶನಿವಾರ ಈ ಘಟನೆ ನಡೆದಿದೆ. ಊಟದ ನಂತರ ಹತ್ತಾರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು ಮತ್ತು ಅವರನ್ನು ಚಿಕಿತ್ಸೆಗಾಗಿ ಫೋರ್ಬ್ಸ್‌ಗಂಜ್‌ನ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. 


COMMERCIAL BREAK
SCROLL TO CONTINUE READING

ವಿದ್ಯಾರ್ಥಿಗಳ ಊಟಕ್ಕೆ ಕಿಚಿಡಿ ಬಡಿಸಿದರು. ಆಗ ವಿದ್ಯಾರ್ಥಿಯೊಬ್ಬನಿಗೆ ತನ್ನ ತಟ್ಟೆಯಲ್ಲಿ ಸತ್ತ, ಬೇಯಿಸಿದ ಹಾವಿನ ಮರಿ ಕಂಡಿತು. ವಿದ್ಯಾರ್ಥಿಗಳ ದೂರಿನ ನಂತರ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ನಿಲ್ಲಿಸಲಾಯಿತು. ಆದರೆ ಹೆಚ್ಚಿನ ಮಕ್ಕಳು ಆಗಲೇ ಊಟ ಮಾಡಿದ್ದರು. ಆಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ವಾಂತಿಭೇದಿ ಕಾಣಿಸಿಕೊಂಡಾಗ ಕೂಡಲೇ ಶಾಲಾ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಫೋರ್ಬ್ಸ್‌ಗಂಜ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇದನ್ನೂ ಓದಿ: ಅಡುಗೆ ಭಟ್ಟನಿಗೆ ಕಷ್ಟಯಾಕೆ ಆಂತ ಗ್ಯಾಸ್‌ ಮೇಲೆ ಕುಳಿತ ಕೋಳಿ..! ಆಮೇಲೆ ಏನಾಯ್ತು..?


ಹಾವು ತುಂಬಿದ ಆಹಾರ ಸೇವಿಸಿದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಸುದ್ದಿ ಸ್ಥಳೀಯರಲ್ಲಿ ಸಂಚಲನ ಮೂಡಿಸಿದೆ. ಅಲ್ಲದೆ ಈ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಹಾಗೂ ಸ್ಥಳೀಯರು ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಮಧ್ಯಾಹ್ನದ ಊಟದಲ್ಲಿ ಹಾವು ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಎಸ್‌ಡಿಎಂ, ಎಸ್‌ಡಿಒ, ಡಿಎಸ್‌ಪಿ ಸೇರಿದಂತೆ ಎಲ್ಲಾ ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸ್ಥಿತಿಗತಿ ವಿಚಾರಿಸಿದರು. ಅಲ್ಲದೆ, ಘಟನೆಯ ಬಗ್ಗೆ ತನಿಖೆ ನಡೆಸಿ ಸಂಪೂರ್ಣ ವರದಿ ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗಿದೆ. 


ಇನ್ನು 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದರೂ 25 ಮಕ್ಕಳು ಮಾತ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆ ಮತ್ತು ಆಸ್ಪತ್ರೆಗೆ ಆಗಮಿಸಿ ಶಾಲಾ ಸಿಬ್ಬಂದಿ ವಿರುದ್ಧ ವಾಗ್ದಾಳಿ ನಡೆಸಿದರು. ಇದರಿಂದ ಕೋಪಗೊಂಡ ಗ್ರಾಮಸ್ಥರು ಶಾಲಾ ಮುಖ್ಯೋಪಾಧ್ಯಾಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 


ಇದನ್ನೂ ಓದಿ: Optical Illusion: ಹದ್ದಿನಂತ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಹಾವನ್ನು 10 ಸೆಕೆಂಡುಗಳಲ್ಲಿ ಪತ್ತೆಹಚ್ಚಿ! ಜೀನಿಯಸ್’ಗೆ ಮಾತ್ರ ಸಾಧ್ಯ


ಅಲ್ಲದೆ, ಮಧ್ಯಾಹ್ನದ ಊಟದಲ್ಲಿ ಹಾವು ಬಂದಿರುವುದು ಇದೇ ಮೊದಲೇನಲ್ಲ. ಈ ಹಿಂದೆ 54ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಿಹಾರದ ಸೀತಾಮರಿ ಜಿಲ್ಲೆಯಲ್ಲಿ ಹಾವು ಇದ್ದ ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದರು. ಮೇಲಾಗಿ ಹಾವು, ಹಲ್ಲಿ, ಕ್ರಿಮಿಕೀಟಗಳಿಂದ ಕಲುಷಿತವಾದ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆಗಳು ಸಾಕಷ್ಟು ನಡೆಯುತ್ತಿದ್ದರೂ ಶಾಲೆಯ ಸಿಬ್ಬಂದಿ ಅದೇ ನಿರ್ಲಕ್ಷ್ಯ ತೋರುತ್ತಿರುವುದು ವಿದ್ಯಾರ್ಥಿಗಳ ಪಾಲಕರ ಆತಂಕವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ