ಮುಂಬೈ: ಸ್ನೇಹಪರ ವ್ಯಕ್ತಿತ್ವಕ್ಕೆ ಹೆಸರಾಗಿದ್ದ ಸಮಾಜ ಸೇವಕ ಸ್ವರೂಪ್ ಚಂದ್ ಗೋಯಲ್(89) ಅವರು ಸೋಮವಾರ ಮುಂಬೈನಲ್ಲಿ ನಿಧನರಾಗಿದ್ದಾರೆ. ಮೃತರು ಇಬ್ಬರೂ ಗಂಡು ಮಕ್ಕಳು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.


COMMERCIAL BREAK
SCROLL TO CONTINUE READING

ಗೋಯಲ್ ಅವರ ಅಂತಿಮ ವಿಧಾನಗಳನ್ನು ಮಂಗಳವಾರ ಮುಂಬೈನಲ್ಲಿ ನೆರವೇರಿಸಲಾಯಿತು. ಭಾರತೀಯ ಜನತಾ ಪಕ್ಷದ ಮಹಾರಾಷ್ಟ್ರ ಘಟಕದ ರಾಜ್ ಕೆ ಪುರೋಹಿತ್, ಅತುಲ್ ಷಾ ಮತ್ತು ಮಂಗಲ್ ಪ್ರಭಾತ್ ಲೋಧಾ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಗೋಯಲ್ ಅವರಿಗೆ ಅಂತಿಮ ವಿದಾಯ ಹೇಳಿದರು. 


1930ರ ಆಗಸ್ಟ್ 18ರಂದು ಜನಿಸಿದ ಗೋಯಲ್ ಅವರ 90ನೇ ಹುಟ್ಟುಹಬ್ಬದ ಅದ್ದೂರಿ ಆಚರಣೆಗೆ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿಯೇ ಗೋಯಲ್ ನಿಧನ ಹಲವರಿಗೆ ನೋವುಂಟುಮಾಡಿದೆ. 'ಬಾಪೂಜಿ' ಎಂದೇ ಕರೆಯಲ್ಪಡುತ್ತಿದ್ದ ಗೋಯಲ್ ಅವರು ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. 


ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದ ಗೋಯಲ್, ವಾಜಪೇಯಿ ಅವರೊಂದಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.