ನವದೆಹಲಿ: ಈ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸುಧಾರಿಸಲು ಸೋನಿಯಾ ಗಾಂಧಿ ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಇಂದು ಸಂಜೆ, ತಮ್ಮ ನಿವಾಸ 10 ಜನಪಥದಲ್ಲಿ ಕಾಂಗ್ರೆಸ್ ಆಡಳಿತವುಳ್ಳ ರಾಜ್ಯಗಳ ಮುಖ್ಯಮಂತ್ರಿಗಳ ಪ್ರಮುಖ ಸಭೆ ಕರೆಯಲಾಗಿದೆ. ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷರ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ, ಪಕ್ಷವನ್ನು ಮತ್ತೆ ಮೇಲೆತ್ತುವ ಸಲುವಾಗಿ ಸೋನಿಯಾ ಗಾಂಧಿ ತುಂಬಾ ಸಕ್ರಿಯರಾಗಿದ್ದಾರೆ. ಅದೇ ಸಮಯದಲ್ಲಿ, ವಿಧಾನಸಭಾ ಚುನಾವಣೆ ನಡೆಯಲಿರುವ ಮೂರು ರಾಜ್ಯಗಳಿಗೆ ಕಾರ್ಯತಂತ್ರ ರೂಪಿಸಲು ಅವರು ವಿಶೇಷ ಗಮನ ಹರಿಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಇಂತಹ ಪರಿಸ್ಥಿತಿಯಲ್ಲಿ ಸೋನಿಯಾ ಗಾಂಧಿ ತಮ್ಮ ನಿವಾಸ 10 ಜನಪಥದಲ್ಲಿ ಕಾಂಗ್ರೆಸ್ ಆಡಳಿತವುಳ್ಳ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಗೇಲ್, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸಾಮಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ, ವಿಧಾನಸಭೆ ಚುನಾವಣೆ ನಡೆಯಲಿರುವ ಮೂರು ರಾಜ್ಯಗಳಿಗೆ ಸಂಬಂಧಿಸಿದಂತೆ ಸೋನಿಯಾ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.


ಕಾಂಗ್ರೆಸ್‌ನಲ್ಲಿ ಅಂತರಿಕ ಕಿತ್ತಾಟದ ವರದಿಗಳಿರುವ ನಡುವೆ ಸೋನಿಯಾ ಗಾಂಧಿ ಈ ಸಭೆಯನ್ನು ಕರೆದಿದ್ದಾರೆ. ಪಕ್ಷದಲ್ಲಿ ಏನೇ ಒಳಜಗಳವಿದ್ದರೂ ಅದನ್ನು ಪಕ್ಷದ ಸಭೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಅದು ಸಾಧ್ಯವಾಗದಿದ್ದರೆ, ಪಕ್ಷದ ಅಧ್ಯಕ್ಷರು ನಿಮಗೆ ಸಹಾಯ ಮಾಡಲಿದ್ದಾರೆ ಎಂದು ಇತ್ತೀಚೆಗಷ್ಟೇ ಸೋನಿಯಾ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದರು. 


ಸೋನಿಯಾ ಗಾಂಧಿ ಅವರು ಅಧ್ಯಕ್ಷ ಸ್ಥಾನದ ಉಸ್ತುವಾರಿ ವಹಿಸಿಕೊಂಡ ಕೂಡಲೇ ಒಂದೂವರೆ ತಿಂಗಳೊಳಗೆ ಪಕ್ಷದ ಎಲ್ಲ ಪ್ರಮುಖ ನಾಯಕರೊಂದಿಗೆ ಮಹತ್ವದ ಸಭೆ ಕರೆದಿದ್ದರು. ಆ ಸಭೆಯಲ್ಲಿ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅನೇಕ ವಿಷಯಗಳನ್ನು ಸ್ಪಷ್ಟಪಡಿಸಿದ್ದಾರೆ. ನಾಲ್ಕು ವರ್ಷಗಳ ಕಾಲ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ, ಕೇವಲ ಸೋಶಿಯಲ್ ಮೀಡಿಯಾ ಕೆಲಸದಿಂದ ಮಾತ್ರ ಪಕ್ಷ ಸಂಘಟನೆ ಸಾಧ್ಯವಿಲ್ಲ. ಅದರ ಬದಲಿಗೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಆಗಬೇಕಿದೆ ಎಂಬುದನ್ನು ಮನಗಂಡಿರುವ ಸೋನಿಯಾ ಗಾಂಧಿ, ಪಕ್ಷದ ಎಲ್ಲಾ ನಾಯಕರು ಜನಗಳ ಮಧ್ಯೆ ಬೆರೆತು ಪಕ್ಷ ಸಂಘಟಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.