ನವದೆಹಲಿ: ರಾಜಕೀಯದ ಪ್ರಮುಖ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆಯೊಂದಿಗಿನ ಮೈತ್ರಿಗೆ ಅನುಮೋದನೆ ನೀಡಿದ್ದಾರೆ ಎನ್ನಲಾಗಿದೆ.  


COMMERCIAL BREAK
SCROLL TO CONTINUE READING

ಈ ವಿಚಾರವಾಗಿ ಜೀ ನ್ಯೂಸ್ ಜೊತೆಗೆ ಮಾತನಾಡಿದ ಎನ್‌ಸಿಪಿ ಸಂಸದ ಮಜೀದ್ ಮೆನನ್, 'ಪ್ರಸ್ತುತ ರಾಷ್ಟ್ರಪತಿಗಳ ಆಳ್ವಿಕೆಯಲ್ಲಿರುವ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ನಡುವೆ ಒಪ್ಪಂದ ಮಾಡಿಕೊಳ್ಳಲು ಸೋನಿಯಾ ಗಾಂಧಿ ಅನುಮೋದನೆ ನೀಡಿದ್ದಾರೆ' ಎಂದು ಹೇಳಿದರು.


ನವೆಂಬರ್ 18 ರಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರೊಂದಿಗಿನ ಸಭೆಯಲ್ಲಿ ಶಿವಸೇನೆಗೆ ಬೆಂಬಲ ನೀಡುವ ನಿರ್ಧಾರವನ್ನುಸೋನಿಯಾ ಗಾಂಧಿ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ ಬುಧವಾರ ಕಾಂಗ್ರೆಸ್ ನಾಯಕರು ಡಿಸೆಂಬರ್ ಮೊದಲ ವಾರದಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.


ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಪಕ್ಷವು ಕೋಮುವಾದಿ ಕಾರ್ಯಸೂಚಿಯನ್ನು ಅಂಗೀಕರಿಸಿದರೆ ಪಕ್ಷವು ಶಿವಸೇನೆ-ಕಾಂಗ್ರೆಸ್-ಎನ್‌ಸಿಪಿ ಸಮ್ಮಿಶ್ರ ಸರ್ಕಾರದಿಂದ ತನ್ನ ಬೆಂಬಲವನ್ನು ಹಿಂತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಮುಖಂಡರು ಒತ್ತಿ ಹೇಳಿದರು.  


ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮತ್ತು ಸಚಿವ ಸಂಪುಟ ವಿತರಣೆ ಕುರಿತು ಚರ್ಚೆ ನಡೆಸಲು ಕಾಂಗ್ರೆಸ್ ಮತ್ತು ಎನ್‌ಸಿಪಿಯ ಮಹಾರಾಷ್ಟ್ರ ಸಮನ್ವಯ ಸಮಿತಿ ದೆಹಲಿಯಲ್ಲಿ ಬುಧವಾರ ಸಭೆ ಸೇರಲಿದೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ. ಕಾಂಗ್ರೆಸ್-ಎನ್‌ಸಿಪಿ ಸಭೆಯ ನಂತರ ಶಿವಸೇನೆ ಮುಖಂಡ ಸಂಜಯ್ ರೌತ್ ಅವರು ಪವಾರ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.