ನವದೆಹಲಿ: 2024 ರ ಸಾರ್ವತ್ರಿಕ ಚುನಾವಣೆಗೆ ಈಗಲೇ ಸಿದ್ದತೆ ನಡೆಸಿರುವ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರದಂದು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರೊಂದಿಗೆ ಮೂರನೇ ಸಭೆಯನ್ನು ನಡೆಸಲಿದ್ದಾರೆ.ಜನಪಥ್ ನಲ್ಲಿರುವ ತಮ್ಮ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಕಮಲ್ ನಾಥ್, ದಿಗ್ವಿಜಯ ಸಿಂಗ್, ಮುಕುಲ್ ವಾಸ್ನಿಕ್, ಕೆಸಿ ವೇಣುಗೋಪಾಲ್, ಜೈರಾಮ್ ರಮೇಶ್, ಎಕೆ ಆಂಟನಿ, ಅಂಬಿಕಾ ಸೋನಿ ಮತ್ತು ರಣದೀಪ್ ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕಾಂಗ್ರೆಸ್ ನ G 23 ನಾಯಕ ಗುಲಾಂ ನಬಿ ಆಜಾದ್ ಭೇಟಿ ಮಾಡಿದ ಸೋನಿಯಾ ಗಾಂಧಿ


 ಕಳೆದ ನಾಲ್ಕು ದಿನಗಳಲ್ಲಿ ಸೋನಿಯಾ ಗಾಂಧಿ ಮತ್ತು ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಸೇರಬಹುದು ಎಂಬ ಊಹಾಪೋಹಗಳ ನಡುವೆ ನಡೆಯುತ್ತಿರುವ ಮೂರನೇ ಭೇಟಿಯಾಗಿದೆ.ಮೊದಲ ಸಭೆ ಏಪ್ರಿಲ್ 16 ರಂದು ನಡೆದರೆ ಎರಡನೇ ಸಭೆ ಏಪ್ರಿಲ್ 18 ರಂದು ನಡೆಯಿತು.ಪಕ್ಷದ ಮೂಲಗಳ ಪ್ರಕಾರ ಮುಂಬರುವ ದಿನಗಳಲ್ಲಿ ಇನ್ನೂ ಎರಡು ಸಭೆಗಳು ನಡೆಯಲಿವೆ ಎನ್ನಲಾಗಿದೆ.ಪ್ರಶಾಂತ್ ಕಿಶೋರ್ ಅವರು ಈಗಾಗಲೇ 2024 ರ ಸಾರ್ವತ್ರಿಕ ಚುನಾವಣೆಯ ಮಾರ್ಗಸೂಚಿಯೊಂದಿಗೆ ವಿವರವಾದ ಪ್ರಸ್ತುತಿಯನ್ನು ನೀಡಿದ್ದಾರೆ,ಒಂದು ವಾರದಲ್ಲಿ ಪಕ್ಷದಲ್ಲಿ ಪ್ರಶಾಂತ್ ಕಿಶೋರ ಅವರ ಪಾತ್ರ ತಿಳಿಯಲಿದೆ ಎಂದು ವೇಣುಗೋಪಾಲ್ ಈ ಹಿಂದೆ ಹೇಳಿದ್ದರು.


ಶೀಘ್ರದಲ್ಲೇ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಗೆ ಸೇರ್ಪಡೆ


ಇತ್ತೀಚಿಗೆ ನಡೆದ ಸಭೆಯಲ್ಲಿ ಉತ್ತರಪ್ರದೇಶ, ಬಿಹಾರ ಮತ್ತು ಒಡಿಶಾದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಬೇಕು ಮತ್ತು ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ಮೈತ್ರಿ ಮಾಡಿಕೊಳ್ಳಬೇಕು ಎಂದು ಪ್ರಶಾಂತ್ ಕಿಶೋರ್ ತಿಳಿಸಿದ್ದರು. ಅಷ್ಟೇ ಅಲ್ಲದೆ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ 370 ಲೋಕಸಭಾ ಕ್ಷೇತ್ರಗಳ ಮೇಲೆ ಕಾಂಗ್ರೆಸ್ ಪಕ್ಷವು ಗಮನಹರಿಸಬೇಕು ಎಂದು ಕಿಶೋರ್ ಹೇಳಿದ್ದಾರೆಂದು ತಿಳಿದುಬಂದಿದೆ.ಈ ವರ್ಷ ಗುಜರಾತ್ ಮತ್ತು ಹಿಮಾಚಲ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಚುನಾವಣಾ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಸಭೆಗಳು ನಡೆಯುತ್ತಿವೆ. ಐದು ರಾಜ್ಯಗಳಲ್ಲಿ ಇತ್ತೀಚಿನ ಚುನಾವಣಾ ಸೋಲಿನ ನಂತರ, ಕಾಂಗ್ರೆಸ್ ಕಿಶೋರ್ ಅವರೊಂದಿಗೆ ಮಾತುಕತೆಗಳನ್ನು ಪುನರಾರಂಭಿಸಲು ಪ್ರಯತ್ನಿಸುತ್ತಿದೆ.


ಇದನ್ನೂ ಓದಿ: ಆಂತರಿಕ ಚುನಾವಣೆಗೂ ಮೊದಲು ಡಿಜಿಟಲ್ ಸದಸ್ಯತ್ವ ಪಡೆದುಕೊಂಡ ಸೋನಿಯಾ ಗಾಂಧಿ


ದೇಶದಲ್ಲಿ ಕಾಂಗ್ರೆಸ್ ಪಕ್ಷವು ಬಲಹೀನಗೊಂಡಿರುವ ಹಿನ್ನಲೆಯಲ್ಲಿ ಈಗ ಆ ಸ್ಥಾನವನ್ನು ತುಂಬಲು ತೃಣಮೂಲ ಹಾಗೂ ಆಮ್ ಆದ್ಮಿ ಪಕ್ಷಗಳು ತಮ್ಮ ಪಕ್ಷದ ತಳಹದಿಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ವಿಸ್ತರಿಸಲು ಪ್ರಯತ್ನಿಸುತ್ತಿವೆ.ಇದರಿಂದಾಗಿ ಅವು ಪ್ರತಿ ರಾಜ್ಯಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಎದುರು ನೋಡುತ್ತಿವೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.