ಮೇ 23 ಕ್ಕೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ
ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮೇ 23 ರಂದು ಪ್ರತಿಪಕ್ಷಗಳ ನಾಯಕರನ್ನು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಈಗ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ನವದೆಹಲಿ: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮೇ 23 ರಂದು ಪ್ರತಿಪಕ್ಷಗಳ ನಾಯಕರನ್ನು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಈಗ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
2017 ರಲ್ಲಿ ಮಗ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿದ ನಂತರ ಸೋನಿಯಾ ಗಾಂಧಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳುವುದರರಿಂದ ಹಿಂದೆ ಸರಿದಿದ್ದಾರೆ. ಈಗ ಆ ಜವಾಬ್ದಾರಿಯನ್ನು ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ನಿರ್ವಹಿಸುತ್ತಿದ್ದಾರೆ.ಯುಪಿಎ ಅಧ್ಯಕ್ಷೆಯಾಗಿರುವ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕಳೆದ ಸಾರಿ ಗಳಿಸಿದಷ್ಟು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.ಈ ಹಿನ್ನಲೆಯಲ್ಲಿ ಈಗ ಸೋನಿಯಾ ಗಾಂಧಿ ಎಲ್ಲ ಪ್ರತಿಪಕ್ಷಗಳನ್ನುವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಹಲವು ನಾಯಕರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿಮೂಲಗಳು ಹೇಳುವಂತೆ ಈಗಾಗಲೇ ಸೋನಿಯಾ ಗಾಂಧಿ ಅವರು ದೇವೇಗೌಡ, ಶರದ್ ಪವಾರ್, ಮಾಯಾವತಿ, ಅಖಿಲೇಶ್ ಯಾದವ್ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.ಇವರ ಜೊತೆ ಅದು ತೆಲಂಗಾಣದ ಕೆಸಿಆರ್, ನವೀನ್ ಪಟ್ನಾಯಕ್ ,ಜಗಮೋಹನ್ ರೆಡ್ಡಿಯವರನ್ನು ಸಹಿತ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಕಾಂಗ್ರೆಸ್ ಕೂಡ ಪ್ರಧಾನಿ ಯಾರಾಗಬೇಕೆನ್ನುವ ವಿಚಾರದಲ್ಲಿ ಮೃದು ಧೋರಣೆಯನ್ನು ತಳೆದಿದೆ.ಕಾಂಗ್ರೆಸ್ ಹೊರತಾಗಿ ಬೇರೆ ಯಾರಾದರು ಪ್ರಧಾನಿಯಾದರೆ ತಮ್ಮ ಅಭ್ಯಂತರವಿಲ್ಲ ಎಂದು ಹೇಳುವ ಮೂಲಕ ಎಲ್ಲ ಪಕ್ಷಗಳನ್ನು ಸೆಳೆಯುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ಮೇ 23 ಸಮಯವನ್ನು ಕಾಲಹರಣ ಮಾಡದೇ ಸರ್ಕಾರ ರಚಿಸುವ ಎಲ್ಲ ಪ್ರಯತ್ನಕ್ಕೆ ಈಗಲೇ ತಯಾರಿ ನಡೆಸಿದೆ ಎನ್ನಲಾಗಿದೆ.