ನವದೆಹಲಿ: ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೋವಿಡ್ ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ದಿನಗಳ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ತಗುಲಿತ್ತು.
ಇದನ್ನೂ ಓದಿ: ವಾರಾಂತ್ಯದ ಟ್ರಿಪ್‌ಗೆ ರಾಷ್ಟ್ರ ರಾಜಧಾನಿಯ ಈ ಸ್ಥಳಗಳು ಬೆಸ್ಟ್
ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಕಾಂಗ್ರೆಸ್ ಪಕ್ಷ ಸ್ಪಷ್ಟನೆ ನೀಡಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ತಂಡ ತಪಾಸಣೆ ನಡೆಸುತ್ತಿದೆ ಎಂದು ಪಕ್ಷ ಟ್ವೀಟ್ ಮೂಲಕ ತಿಳಿಸಿದೆ.
ಕೋವಿಡ್ ಸಂಬಂಧಿತ ಸಮಸ್ಯೆಯಿಂದಾಗಿ ಸೋನಿಯಾ ಗಾಂಧಿ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದ್ದು, ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ: Early Marriage Tips: ವಿವಾಹ ಯೋಗ ಕೂಡಿ ಬರುತ್ತಿಲ್ಲವೇ? ಇಂದೇ ಈ ಉಪಾಯ ಅನುಸರಿಸಿ
ಇತ್ತೀಚೆಗೆಯಷ್ಟೇ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಜೂನ್ 8ರಂದು ತನಿಖೆಗೆ ಹಾಜರಾಗುವಂತೆ ಇಡಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ನೋಟಿಸ್ ನೀಡಿತ್ತು. ಆದರೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ತಗುಲಿದ್ದು, ಈ ಹಿನ್ನೆಲೆಯಲ್ಲಿ ಹಾಜರಾತಿಗೆ ವಿನಾಯಿತಿ ಕೋರಿ ಮನವಿ ಸಲ್ಲಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.