ನವದೆಹಲಿ : ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮತ್ತೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇವರಿಗೆ 3 ತಿಂಗಳೊಳಗೆ ಇದು ಎರಡನೇ ಭಾರಿ ಕೋವಿಡ್ ಪಾಸಿಟಿವ್ ಬಂದಿದೆ.
ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡು, ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಇಂದು ಕೋವಿಡ್ -19 ಗೆ ಪಾಸಿಟಿವ್ ಬಂದಿದೆ. ಅವರು ಸರ್ಕಾರಿ ಪ್ರೋಟೋಕಾಲ್ ಪ್ರಕಾರ ಪ್ರತ್ಯೇಕವಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.
Congress President Smt.Sonia Gandhi has tested positive for Covid-19 today. She will remain in isolation as per Govt. protocol.
आज कांग्रेस अध्यक्ष श्रीमती सोनिया गांधी का कोविड-19 टेस्ट रिपोर्ट पॉजिटिव आया है। वह सरकार द्वारा जारी प्रोटोकॉल का पालन करते हुए आइसोलेशन में रहेंगी।
— Jairam Ramesh (@Jairam_Ramesh) August 13, 2022
ಈ ಹಿಂದೆ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜೂನ್ 8 ರಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಮುಂಚಿತವಾಗಿ ಸೋನಿಯಾ ಗಾಂಧಿಯವರಿಗೆ ಕೊರೊನಾ ನೆಗೆಟಿವ್ ಬಂದಿದೆ.
ಈ ಬಗ್ಗೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್ -19 ಗೆ ಪಾಸಿಟಿವ್ ಬಂದಿದೆ. ಅವರು ಸ್ವಲ್ಪ ಜ್ವರ ಮತ್ತು ಕೆಲವು ರೋಗಲಕ್ಷಣಗಳನ್ನು ಉಲ್ಬಣಗೊಂಡ ಕಾರಣ ಅವರು ಸ್ವತಃ ಪ್ರತ್ಯಕವಾಗಿ, ವೈದ್ಯಕೀಯ ಆರೈಕೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.