ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್(Amarinder Singh) ಶನಿವಾರ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂದಿನ ಸಿಎಂ ಯಾರಾಗಲಿದ್ದಾರೆಂಬ ಕುತೂಹಲ ಮೂಡಿದೆ. ಹೀಗಾಗಿ ಎಲ್ಲರ ಚಿತ್ತ ಇದೀಗ ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರ ಮೇಲಿದೆ.
ಪಕ್ಷದ ಮೂಲಗಳ ಪ್ರಕಾರ ಚಂಡೀಗಢದಲ್ಲಿ ಭಾನುವಾರ ಬೆಳಿಗ್ಗೆ 11 ಗಂಟೆಗೆ ಕರೆಯಲಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯ ನಂತರ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಶನಿವಾರ ಸಂಜೆ ನಡೆದ CLP ಸಭೆಯಲ್ಲಿ ಪಂಜಾಬ್ ಕಾಂಗ್ರೆಸ್ ಶಾಸಕರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi)ಯವರನ್ನು ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವಂತೆ ನಿರ್ಣಯವನ್ನು ಅಂಗೀಕರಿಸಿದ್ದರು.
ಇದನ್ನೂ ಓದಿ: ಆಫ್ ಲೈನ್ ಪರೀಕ್ಷೆ ನಡೆಸಲು ಕೇರಳಕ್ಕೆ ಅನುಮತಿ ನೀಡಿದ ಸುಪ್ರೀಂ, ಸೆ. 24ಕ್ಕೆ ಪರೀಕ್ಷೆ
ನಂತರ ಅದೇ ದಿನ ದೆಹಲಿಯಲ್ಲಿರುವ ರಾಹುಲ್ ಗಾಂಧಿ(Rahul Gandhi)ಯವರ ನಿವಾಸದಲ್ಲಿ ಸಭೆ ಮಹತ್ವದ ನಡೆದಿದೆ. ಈ ವೇಳೆ ಪಂಜಾಬ್ ನ ನೂತನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾರನ್ನು ಆಯ್ಕೆ ಮಾಡಬೇಕೆಂಬುದರ ಬಗ್ಗೆ ಚರ್ಚೆ ನಡೆದಿದೆ. ಸಭೆ ಬಳಿಕ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಅಂಬಿಕಾ ಸೋನಿ ಅವರು ರಾಹುಲ್ ನಿವಾಸದಿಂದ ಕಾರಿನಲ್ಲಿ ಹೋಗಿರುವುದನ್ನು ಮಾಧ್ಯಮಗಳ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕೌನ್ ಬನೇಗಾ ಸಿಎಂ..?
ಕ್ಯಾಪ್ಟನ್ ಅಮರೀಂದರ್ ಸಿಂಗ್(Amarinder Singh) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪಂಜಾಬ್ ಮುಖ್ಯಮಂತ್ರಿ ಗಾದಿ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ ಪಂಜಾಬ್ ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಸುನಿಲ್ ಜಖರ್, ಲುಧಿಯಾನಾ ಸಂಸದ ರವನೀತ್ ಸಿಂಗ್ ಬಿಟ್ಟು, ರಾಜ್ಯಸಭಾ ಸಂಸದ ಪ್ರತಾಪ್ ಸಿಂಗ್ ಬಾಜ್ವಾ ಮತ್ತು ಸುಖಜಿಂದರ್ ಸಿಂಗ್ ರಾಂಧವ ಇದ್ದಾರೆಂದು ತಿಳಿದುಬಂದಿದೆ.
#WATCH | Delhi: Congress General Secretary (Organisation) KC Venugopal and Rajya Sabha MP from Punjab, Ambika Soni leave from the residence of Rahul Gandhi after a crucial meeting following the resignation of Punjab CM Captain Amarinder Singh pic.twitter.com/hilgRjzrQh
— ANI (@ANI) September 18, 2021
ಇದನ್ನೂ ಓದಿ: ಮಮತಾ ಬ್ಯಾನರ್ಜಿ ಸೋದರಳಿಯನ ಪತ್ನಿಗೆ ದೆಹಲಿ ಕೋರ್ಟ್ ನಿಂದ ಸಮನ್ಸ್
ಇದಲ್ಲದೆ ಪಕ್ಷದ ಹಿರಿಯ ನಾಯಕರಾಗಿರುವ ಅಂಬಿಕಾ ಸೋನಿ, ಟ್ರಿಪ್ಟ್ ರಾಜಿಂದರ್ ಸಿಂಗ್ ಬಜ್ವಾ, ಬ್ರಹ್ಮ ಮೊಹಿಂದ್ರಾ, ವಿಜಯ್ ಇಂದರ್ ಸಿಂಗ್ಲಾ, ಪಂಜಾಬ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕುಲ್ಜಿತ್ ಸಿಂಗ್ ನಾಗ್ರಾ ಮತ್ತು ಇನ್ನಿತರರ ಹೆಸರುಗಳು ಕೂಡ ಸಿಎಂ ಸ್ಥಾನದ ರೇಸ್ನಲ್ಲಿವೆ ಎಂದು ತಿಳಿದು ಬಂದಿದೆ. ಆದರೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು(Navjot Singh Sidhu) ಅವರು ಮುಖ್ಯಮಂತ್ರಿ ರೇಸ್ ನಿಂದ ಹೊರಗುಳಿದಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಪಂಜಾಬ್ ನಲ್ಲಿನಾಯಕತ್ವ ಬದಲಾವಣೆ
ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾಯಿಸುವಂತೆ 40 ಕಾಂಗ್ರೆಸ್ ಶಾಸಕರು ಒತ್ತಾಯಿಸಿದ ಬಳಿಕ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿತ್ತು. ಈ ಹಿನ್ನೆಲೆ ಶನಿವಾರ ಸಂಜೆ ರಾಜಭವನಕ್ಕೆ ತೆರಳಿದ ಕ್ಯಾ.ಅಮರೀಂದರ್ ಸಿಂಗ್ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಪಂಜಾಬ್ ನ 40 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದರು. ರಾಜೀನಾಮೆ ನೀಡಿದ ಬಳಿಕ ನವಜೋತ್ ಸಿಂಗ್ ಸಿಧು ವಿರುದ್ಧ ಅಮರಿಂದರ್ ಸಿಂಗ್ ತೀವ್ರ ವಾಗ್ದಾಳಿ ನಡೆಸಿದ್ದರು. ಸಿಧು ದೇಶದ್ರೋಹಿ, ಅವರಿಂದ ದೇಶದ ಭದ್ರತೆಗೆ ಅಪಾಯವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.