ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಯೋಗ ಗುರು ಬಾಬಾ ರಾಮದೇವ್, ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿದ್ದಾಗ ಅಮಿತ್ ಶಾ ಜೈಲಿನಲ್ಲಿ ಸಾಯಬೇಕೆಂದು ಅವರು ಬಯಸಿದ್ದರು ಎಂದು ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ಉತ್ತರಪ್ರದೇಶದ ನೋಯ್ಡಾದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಮದೇವ್, ಗಾಂಧಿ ಕುಟುಂಬವು "ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಜೀವಂತವಾಗಿರಲು ಬಯಸುವುದಿಲ್ಲ" ಎಂದು ಹೇಳಿದ್ದಾರೆ.


ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಜೈಲಿನಲ್ಲಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ವಿರುದ್ಧವೂ ವಾಗ್ದಾಳಿ ನಡೆಸಿದ ಶಾ, "ಅಮಿತ್ ಷಾ ಅವರನ್ನು ಜೈಲಿಗೆ ಕಳುಹಿಸಿದ ಪಿ ಚಿದಂಬರಂ, ಈಗ ಸ್ವತಃ ಕಾನೂನು ತೊಂದರೆಗೆ ಸಿಲುಕಿದ್ದಾರೆ. ಇದನ್ನು ಅವರು ಕನಸಿನಲ್ಲಿಯೂ ಯೋಚಿಸಿರಲಿಲ್ಲ. ಕಾನೂನು ಉಲ್ಲಂಘಿಸಿದವರಿಗೆ ಶಿಕ್ಷೆ ಖಂಡಿತ" ಎಂದು ರಾಮದೇವ್ ಹೇಳಿದರು.


2011 ರ ಜೂನ್‌ನಲ್ಲಿ ರಾಷ್ಟ್ರ ರಾಜಧಾನಿಯ ರಾಮ್‌ಲೀಲಾ ಮೈದಾನದಲ್ಲಿ ಭ್ರಷ್ಟಾಚಾರದ ವಿರುದ್ಧ ನಡೆದ ಭ್ರಷ್ಟಾಚಾರದ ವಿರುದ್ಧ ರಾಮದೇವ್ ಮತ್ತು ಅವರ ಅನುಯಾಯಿಗಳ ಸಭೆಯ ಮೇಲೆ ಮಧ್ಯರಾತ್ರಿ ದೌರ್ಜನ್ಯ ನಡೆದಾಗ ಚಿದಂಬರಂ ಗೃಹ ಸಚಿವರಾಗಿದ್ದರು ಎಂಬುದನ್ನು ಇಲ್ಲಿ ಗಮನಿಸಬಹುದು.