ಶೀಘ್ರದಲ್ಲೇ ಬ್ಯಾಂಕ್ ನೌಕರರ ಶೇ. 17 ರಷ್ಟು ವಾರ್ಷಿಕ ವೇತನ ಭತ್ಯೆ ಹೆಚ್ಚಳ
Bank employees : ಬ್ಯಾಂಕ್ ನೌಕರರಿಗೆ ಶೇ. 17 ರಷ್ಟು ವಾರ್ಷಿಕ ವೇತನ ಭತ್ಯೆ ಹೆಚ್ಚಳವನ್ನು ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಶುಕ್ರವಾರ ಒಪ್ಪಿಗೆ ನೀಡಿದ್ದು, ಸಿಹಿಸುದ್ದಿಯೊಂದು ನೀಡಿದೆ.
Increase in annual salary allowance : ಬ್ಯಾಂಕ್ ನೌಕರರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದ್ದು,. ಶೇ. 17 ರಷ್ಟು ವಾರ್ಷಿಕ ವೇತನ ಭತ್ಯೆ ಹೆಚ್ಚಳವನ್ನು ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಶುಕ್ರವಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ವಾರ್ಷಿಕವಾಗಿ ಸುಮಾರು 8,284 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ.
ಅಖಿಲ ಭಾರತೀಯ ಬ್ಯಾಂಕ್ ಅಧಿಕಾರಿಗಳ ಒಕ್ಕೂಟವು ನವೆಂಬರ್ 2022 ರಿಂದ ಜಾರಿಗೆ ಬರಲಿರುವ ವೇತನ ಹೆಚ್ಚಳದಿಂದ ಸುಮಾರು 8 ಲಕ್ಷ ಬ್ಯಾಂಕ್ ಉದ್ಯೋಗಿಗಳು ಪ್ರಯೋಜನ ಪಡೆಯಲಿದ್ದಾರೆ. ಅಲ್ಲದೇ ಸರ್ಕಾರಿ ಅಧಿಸೂಚನೆಗೆ ಬಾಕಿಯಿರುವ ಎಲ್ಲಾ ಶನಿವಾರಗಳನ್ನು ರಜೆಯೆಂದು ಗುರುತಿಸುವ ಜಂಟಿ ಟಿಪ್ಪಣಿಯನ್ನು ಒಪ್ಪಿಕೊಳ್ಳಲಾಗಿದೆ. ಪರಿಷ್ಕೃತ ಕೆಲಸದ ಸಮಯವು ಸರ್ಕಾರದ ಅಧಿಸೂಚನೆಯ ನಂತರ ಜಾರಿಗೆ ಬರಲಿದೆ ಎಂದು ತಿಳಿಸಿದೆ.
ಇದನ್ನು ಓದಿ :ಮಹಾಶಿವರಾತ್ರಿಗೆ ಸರ್ಪ್ರೈಸ್ ನೀಡಿದ ʼಕಲ್ಕಿʼ ಟೀಂ..! ಪ್ರಭಾಸ್ ಪಾತ್ರದ ಹೆಸರು ಬಹಿರಂಗ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಐಬಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಮೆಹ್ತಾ, ಯುಎಫ್ ಬಿಯು ಮತ್ತಿತರು ಬ್ಯಾಂಕ್ ನೌಕರರು ಸಂಘಗಳು ವೇತನ ಪರಿಷ್ಕರಣೆ ಕುರಿತ 9ನೇ ಜಂಟಿ ಟಿಪ್ಪಣಿ ಮತ್ತು 12 ದ್ವಿಪಕ್ಷೀಯ ಇತ್ಯರ್ಥ ಮತ್ತು ಬ್ಯಾಂಕ್ ಅಧಿಕಾರಿಗಳು ಮತ್ತು ನೌಕರರ ಪರಿಷ್ಕೃತ ವೇತನಕ್ಕೆ ಸಹಿ ಹಾಕಿರುವುದರಿಂದ ಇದು ಬ್ಯಾಂಕಿಂಗ್ ಉದ್ಯಮಕ್ಕೆ ಮಹತ್ವದ ಮೈಲಿಗಲ್ಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : WHO : ರಂಜಾನ್ ಉಪವಾಸದಲ್ಲಿ ಅರೋಗ್ಯ ಕಾಪಾಡಿಕೊಳ್ಳಲು ಮಾರ್ಗಸೂಚಿ ಬಿಡುಗಡೆ
"8088 ಅಂಕಗಳಿಗೆ ಅನುಗುಣವಾದ ತುಟ್ಟಿಭತ್ಯೆ ಮತ್ತು ಹೆಚ್ಚುವರಿ ಹೊರೆಯನ್ನು ವಿಲೀನಗೊಳಿಸಿದ ನಂತರ ಹೊಸ ವೇತನ ಶ್ರೇಣಿಗಳನ್ನು ಪರಿಷ್ಕರಿಸಲಾಗಿದೆ. ಹೊಸ ವೇತನ ಪರಿಷ್ಕರಣೆಯಡಿ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ವೈದ್ಯಕೀಯ ಪ್ರಮಾಣಪತ್ರವನ್ನು ನೀಡದೆ ತಿಂಗಳಿಗೆ ಒಂದು ದಿನ ಅನಾರೋಗ್ಯ ರಜೆ ತೆಗೆದುಕೊಳ್ಳಲು ಅನುಮತಿಸಲಾಗಿದೆ ಎಂದು ತಿಳಿಸಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ