ಚಳಿ ಮಧ್ಯೆ ಮಳೆ ಅಬ್ಬರ: ಈ ಭಾಗಗಳಲ್ಲಿ ಮುಂದಿನ 2 ದಿನ ಭರ್ಜರಿ ಮಳೆ-ಚಂಡಮಾರುತದ ಸುಳಿಗೆ ಸಿಲುಕುವ ಭೀತಿ
Weather Update 2023: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
Weather Update 2023: ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡು, ಕೇರಳ ಮತ್ತು ಪುದುಚೇರಿ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಬಿಳಿಕೂದಲನ್ನು ಕೇವಲ 10 ನಿಮಿಷದಲ್ಲಿ ಬುಡದಿಂದಲೇ ಶಾಶ್ವತವಾಗಿ ಕಪ್ಪಾಗಿಸುತ್ತೆ ತೆಂಗಿನಕಾಯಿ ಸಿಪ್ಪೆ
ಈ ಮಧ್ಯೆ ಹವಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದ್ದು, ಬುಧವಾರ ದಕ್ಷಿಣ ಅಂಡಮಾನ್ ಸಮುದ್ರಕ್ಕೆ ತೆರಳದಂತೆ ಸಲಹೆ ನೀಡಿದೆ.
ಮೀನುಗಾರರು ಬುಧವಾರದಿಂದ ಶುಕ್ರವಾರದವರೆಗೆ ಆಗ್ನೇಯ ಬಂಗಾಳಕೊಲ್ಲಿಗೆ ಹಾಗೂ ಗುರುವಾರ ಮತ್ತು ಶುಕ್ರವಾರದಂದು ನೈಋತ್ಯ, ಪಕ್ಕದ ಬಂಗಾಳಕೊಲ್ಲಿಗೆ ಹೋಗಬಾರದು ಎಂದು ಸಲಹೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಅಪಾಯದಲ್ಲಿದೆ ವಿರಾಟ್ ಕೊಹ್ಲಿಯ ಟೆಸ್ಟ್ ಇತಿಹಾಸದ ಶ್ರೇಷ್ಠ ದಾಖಲೆ
ಇನ್ನೊಂದೆಡೆ ಹವಾಮಾನ ಇಲಾಖೆಯ ಪ್ರಕಾರ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಕೆಲವು ಈಶಾನ್ಯ ರಾಜ್ಯಗಳಲ್ಲಿ ದಟ್ಟವಾದ ಮಂಜು ಬೀಳುವ ಸಾಧ್ಯತೆ ಇದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ