Uttar Pradesh Assembly: ಪ್ರತಿಪಕ್ಷದ ನಾಯಕನಾಗಲಿರುವ ಅಖಿಲೇಶ್ ಯಾದವ್..!

ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಶನಿವಾರದಂದು ಲಕ್ನೋದಲ್ಲಿ ಹೊಸದಾಗಿ ಆಯ್ಕೆಯಾದ ಪಕ್ಷದ ಶಾಸಕರ ಸಭೆಯಲ್ಲಿ ಎಸ್‌ಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

Written by - Zee Kannada News Desk | Last Updated : Mar 26, 2022, 07:36 PM IST
  • ಉತ್ತರ ವಿಧಾನಸಭಾ ಚುನಾವಣೆಯಲ್ಲಿ ಮೈನ್‌ಪುರಿಯ ಕರ್ಹಾಲ್ ಕ್ಷೇತ್ರದಿಂದ ಗೆದ್ದಿದ್ದ ಯಾದವ್ ಅವರು ಇತ್ತೀಚೆಗೆ ಅಜಂಗಢದಿಂದ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
Uttar Pradesh Assembly: ಪ್ರತಿಪಕ್ಷದ ನಾಯಕನಾಗಲಿರುವ ಅಖಿಲೇಶ್ ಯಾದವ್..!   title=
file photo

ನವದೆಹಲಿ: ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಶನಿವಾರದಂದು ಲಕ್ನೋದಲ್ಲಿ ಹೊಸದಾಗಿ ಆಯ್ಕೆಯಾದ ಪಕ್ಷದ ಶಾಸಕರ ಸಭೆಯಲ್ಲಿ ಎಸ್‌ಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಪಕ್ಷದ ಪ್ರಧಾನ ಕಛೇರಿಯಲ್ಲಿ ಹೊಸದಾಗಿ ಚುನಾಯಿತ ಶಾಸಕರ ಮೊದಲ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಉತ್ತರ ಪ್ರದೇಶದ ಎಸ್‌ಪಿ ಮುಖ್ಯಸ್ಥ ನರೇಶ್ ಉತ್ತಮ್ ಪಟೇಲ್, ಯಾದವ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.ಇದರೊಂದಿಗೆ ಎಸ್‌ಪಿ ಅಧ್ಯಕ್ಷರಾದ ಅಖಿಲೇಶ್ ಯಾದವ್ (Akhilesh Yadav) ಉತ್ತರ ಪ್ರದೇಶ ವಿಧಾನಸಭೆಯಲ್ಲಿ (Uttar Pradesh Assembly) ವಿರೋಧ ಪಕ್ಷದ ನಾಯಕರಾಗಿ ನೇಮಕವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಅಂಬೇಡ್ಕರ್‌ವಾದಿಗಳು ಸಮಾಜವಾದಿಗಳೊಂದಿಗೆ ಸೇರಬೇಕು: ಅಖಿಲೇಶ್ ಯಾದವ್

'ಅಖಿಲೇಶ್ ಯಾದವ್ ಅವರು ಮಾರ್ಚ್ 28 ರಂದು ನಮ್ಮ ಮಿತ್ರ ಪಕ್ಷಗಳ ನಾಯಕರು, ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕರನ್ನು ಆಹ್ವಾನಿಸಿದ್ದಾರೆ. ಅವರು ಆ ದಿನ ಬರುತ್ತಾರೆ. ಸದನದ ಕಲಾಪಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಸದನದಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ಹೇಗೆ ಪ್ರಸ್ತಾಪಿಸಬೇಕು ಎಂಬುದರ ಕುರಿತು ಚರ್ಚಿಸಲಾಗುವುದು ಎಂದು ನರೇಶ್ ಉತ್ತಮ್ ಪಟೇಲ್ ಹೇಳಿದರು.

ಉತ್ತರ ವಿಧಾನಸಭಾ ಚುನಾವಣೆಯಲ್ಲಿ ಮೈನ್‌ಪುರಿಯ ಕರ್ಹಾಲ್ ಕ್ಷೇತ್ರದಿಂದ ಗೆದ್ದಿದ್ದ ಯಾದವ್ ಅವರು ಇತ್ತೀಚೆಗೆ ಅಜಂಗಢದಿಂದ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.ಯಾದವ್ ಅವರ ನೇತೃತ್ವದಲ್ಲಿ, ಎಸ್‌ಪಿಯು ಜನರ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸುತ್ತದೆ ಮತ್ತು ರಾಜ್ಯ ಸರ್ಕಾರದ ಸುಳ್ಳು ಪ್ರತಿಪಾದನೆಗಳು ಮತ್ತು ತಪ್ಪು ನೀತಿಗಳನ್ನು ವಿರೋಧಿಸುತ್ತದೆ ಎಂದು ಉತ್ತಮ್ ಹೇಳಿದರು.

ಇದನ್ನೂ ಓದಿ: ಕಾಶ್ಮೀರ ಫೈಲ್ಸ್ ಮಾಡುವುದಾದರೆ ಲಖಿಂಪುರ್ ಫೈಲ್ಸ್ ಕೂಡ ನಿರ್ಮಾಣವಾಗಲಿ- ಅಖಿಲೇಶ್ ಯಾದವ್

ಶುಕ್ರವಾರದಂದು, ಅಖಿಲೇಶ್ ಅವರು ಯೋಗಿ ಆದಿತ್ಯನಾಥ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಸಿದ್ದಕ್ಕೆ ಎಸ್‌ಪಿ ಸರ್ಕಾರ ನಿರ್ಮಿಸಿದ ಕ್ರೀಡಾಂಗಣದಲ್ಲಿ ನಡೆಸಿದ್ದಕ್ಕಾಗಿ ಅವರನ್ನು ಗೇಲಿ ಮಾಡಿದರು. ಎಸ್‌ಪಿ ಸರ್ಕಾರ ನಿರ್ಮಿಸಿದ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕಾಗಿ ನಾನು ಹೊಸ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. 

ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ಸಾರ್ವಜನಿಕರಿಗೆ ನಿಜವಾಗಿಯೂ ಸೇವೆ ಸಲ್ಲಿಸಲು ಪ್ರಮಾಣ ವಚನ ಸ್ವೀಕರಿಸಬೇಕು ಮತ್ತು ಕೇವಲ ಸರ್ಕಾರ ರಚನೆಗಾಗಿ ಅಲ್ಲ ಎಂದು ಹೇಳಿದರು. "ಸರ್ಕಾರ ರಚನೆಗೆ ಮಾತ್ರ ಪ್ರಮಾಣ ವಚನ ಸ್ವೀಕರಿಸಬಾರದು ಆದರೆ ಜನರಿಗೆ ನಿಜವಾಗಿಯೂ ಸೇವೆ ಸಲ್ಲಿಸಬೇಕು" ಎಂದು ಟ್ವೀಟ್ ಮೂಲಕ ಟಾಂಗ್ ನೀಡಿದರು.

ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅಂತರಾಷ್ಟ್ರೀಯ ಕ್ರೀಡಾ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಪ್ರಮಾಣ ವಚನ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಅವರೊಂದಿಗೆ 52 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ನವೆಂಬರ್ 2018 ರಲ್ಲಿ, ಯೋಗಿ ಆದಿತ್ಯನಾಥ್ ಸರ್ಕಾರವು ಏಕನಾ ಇಂಟರ್ನ್ಯಾಷನಲ್ ಸ್ಟೇಡಿಯಂ ಅನ್ನು 'ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಇಂಟರ್ನ್ಯಾಷನಲ್ ಸ್ಪೋರ್ಟ್ಸ್ ಸ್ಟೇಡಿಯಂ' ಎಂದು ಮರುನಾಮಕರಣ ಮಾಡಿತು.ಈ ನಡೆ ಸಮಾಜವಾದಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷದ ನಾಯಕರ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾಗಿತ್ತು. ಉತ್ತರ ಪ್ರದೇಶದಲ್ಲಿ ಬಿಜೆಪಿ 403 ಕ್ಷೇತ್ರಗಳ ಪೈಕಿ 255 ಕ್ಷೇತ್ರಗಳನ್ನು ಗೆಲ್ಲುವ ಮೂಲಕ 41.29 ಶೇಕಡಾ ಮತಗಳನ್ನು ಪಡೆಯುವ ಮೂಲಕ ಅಧಿಕಾರವನ್ನು ಉಳಿಸಿಕೊಂಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News