ಯಶವಂತಪುರ - ಹಜರತ್ ನಿಜಾಮುದ್ದೀನ್ ಗೆ ಏಕಮುಖ ವಿಶೇಷ ರೈಲು ಸೇವೆ

Yesvantpur to Nizamuddin Train: ಯಶವಂತಪುರದಿಂದ ಹಜರತ್ ನಿಜಾಮುದ್ದೀನ್ ಗೆ ಏಕಮುಖ ವಿಶೇಷ ರೈಲನ್ನು ಓಡಿಸಲು ರೈಲ್ವೆ ಮಂಡಳಿಯು ಅನುಮೋದಿಸಿದೆ.

Written by - Chetana Devarmani | Last Updated : Jun 22, 2024, 09:50 AM IST
  • ಯಶವಂತಪುರದಿಂದ ಹಜರತ್ ನಿಜಾಮುದ್ದೀನ್ ರೈಲು
  • ಯಶವಂತಪುರ - ನಿಜಾಮುದ್ದೀನ್ ವಿಶೇಷ ರೈಲು
  • ಯಶವಂತಪುರದಿಂದ ವಿಶೇಷ ರೈಲು ಸೇವೆ
ಯಶವಂತಪುರ - ಹಜರತ್ ನಿಜಾಮುದ್ದೀನ್ ಗೆ ಏಕಮುಖ ವಿಶೇಷ ರೈಲು ಸೇವೆ title=
Yesvantpur to Nizamuddin Train

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರದಿಂದ ಹಜರತ್ ನಿಜಾಮುದ್ದೀನ್ ಗೆ ಏಕಮುಖ ವಿಶೇಷ ರೈಲನ್ನು ಓಡಿಸಲು ರೈಲ್ವೆ ಮಂಡಳಿಯು ಅನುಮೋದಿಸಿದೆ.

ರೈಲು ಸಂಖ್ಯೆ 06519 ಯಶವಂತಪುರ - ಹಜರತ್ ನಿಜಾಮುದ್ದೀನ್ ಏಕಮುಖ ವಿಶೇಷ ರೈಲು ಜೂನ್ 23 ರಂದು ಭಾನುವಾರ ರಾತ್ರಿ 23:40 ಘಂಟೆಗೆ ಯಶವಂತಪುರದಿಂದ ಹೊರಟು, ಜೂನ್ 26 ರಂದು ಬುಧವಾರ ಬೆಳಗ್ಗೆ 06:30 ಘಂಟೆಗೆ ತನ್ನ ಗಮ್ಯಸ್ಥಾನ  ಹಜರತ್ ನಿಜಾಮುದ್ದೀನ್ ತಲುಪಲಿದೆ.

ಇದನ್ನೂ ಓದಿ: ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಒತ್ತು: ರಾಜ್ಯ ಸರ್ಕಾರದ ಮಹತ್ವದ ಸಭೆ

ಈ ವಿಶೇಷ ರೈಲು ತುಮಕೂರು, ಬಾಣಸಂದ್ರ, ಅರಸಿಕೆರೆ, ದಾವಣಗೆರೆ, ಹರಿಹರ, ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮಿರಜ್, ಪುಣೆ, ಕೋಪರಗಾಂ, ಮನ್ಮಾಡ್, ಭುಸಾವಲ್, ಇಟಾರ್ಸಿ, ಭೋಪಾಲ್, ಬೀನಾ, ವೀರಾಂಗಣ  ಲಕ್ಷ್ಮೀಬಾಯಿ ಝಾನ್ಸಿ ಮತ್ತು ಆಗ್ರಾ ಕ್ಯಾಂಟ್ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.

ಈ ವಿಶೇಷ ರೈಲು 9 ಸ್ಲೀಪರ್ ಕ್ಲಾಸ್, 11 ಸಾಮಾನ್ಯ 2ನೇ ದರ್ಜೆಮತ್ತು 2 ಎಸ್ಎಲ್ಆರ್ / ಡಿ ಕ್ಲಾಸ್ ಸೇರಿದಂತೆ ಒಟ್ಟು 22 ಬೋಗಿಗಳು ಹೊಂದಿರುತ್ತದೆ.

ಇದನ್ನೂ ಓದಿ: ಭಾರತಕ್ಕೆ ಇಂಧನ ಭದ್ರತೆ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News