ನವದೆಹಲಿ: ದುಬೈನಿಂದ ಜೈಪುರಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದ ಟೈರ್ ಸ್ಫೋಟಗೊಂಡ ಕಾರಣ ವಿಮಾನವು ಜೈಪುರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.


COMMERCIAL BREAK
SCROLL TO CONTINUE READING

189 ಪ್ರಯಾಣಿಕರಿದ್ದ SG-58 ವಿಮಾನವು  ಬುಧವಾರ ಬೆಳಿಗ್ಗೆ 9 ಗಂಟೆಗೆ ಜೈಪುರ ವಿಮಾನ ನಿಲ್ದಾಣದಲ್ಲಿ ಇಳಿದಾಗ ಟೈರ್ ಸ್ಫೋಟ ಸಂಭವಿಸಿದೆ. ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಯಾವುದೇ ಆಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಆದರೆ ಟೈರ್ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.


ವಿಮಾನ ಇಳಿಯುವಾಗ ಅಥವಾ ಟೇಕ್ ಆಫ್ ಆಗುವ ಸಂದರ್ಭದಲ್ಲಿ ಟೈರ್ ಸ್ಫೋಟಗೊಳ್ಳುವುದು ಅಪಾಯಕಾರಿ. ಈ ಸಂದರ್ಭದಲ್ಲಿ ವಿಮಾನ ಅತಿ ವೇಗ ಮತ್ತು ಭಾರಾವನ್ನು ಹೊಂದಿರುವುದರಿಂದ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ವಾಯುಯಾನ ತಜ್ಞರು ತಿಳಿಸಿದ್ದಾರೆ.