ನವದೆಹಲಿ:  ಕೊರೊನಾ ಪ್ರಕರಣಗಳಲ್ಲಿ ತೀವ್ರ ಹೆಚ್ಚಳ ಕಂಡುಬಂದಿರುವ ಹಿನ್ನಲೆಯಲ್ಲಿ 10 ಮತ್ತು 12 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ಮಹಾರಾಷ್ಟ್ರ ಸರ್ಕಾರ ಮುಂದೂಡಿದೆ.


COMMERCIAL BREAK
SCROLL TO CONTINUE READING

ಈಗ 12 ನೇ ತರಗತಿ ಪರೀಕ್ಷೆಗಳು ಮೇ ಅಂತ್ಯದ ವೇಳೆಗೆ ಮತ್ತು 10ನೇ ತರಗತಿ ಪರೀಕ್ಷೆಗಳು ಜೂನ್‌ನಲ್ಲಿ ನಡೆಯಲಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕವಾಡ್ ತಿಳಿಸಿದ್ದಾರೆ.ಆಡಳಿತವು ಪರಿಸ್ಥಿತಿಯ ಆಧಾರದ ಮೇಲೆ ನಿಖರವಾದ ದಿನಾಂಕಗಳನ್ನು ಪ್ರಕಟಿಸುತ್ತದೆ' ಎಂದು ಅವರು ಹೇಳಿದರು.


ಇದನ್ನೂ ಓದಿ : ಮಕ್ಕಳನ್ನು Corona ಸೋಂಕಿನಿಂದ ರಕ್ಷಿಸುವ ಐದು Super Food


'ಪ್ರಸ್ತುತ ಪರಿಸ್ಥಿತಿಗಳು ಪರೀಕ್ಷೆಗಳನ್ನು ನಡೆಸಲು ಅನುಕೂಲಕರವಾಗಿಲ್ಲ.ನಿಮ್ಮ ಆರೋಗ್ಯ ನಮ್ಮ ಆದ್ಯತೆಯಾಗಿದೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಪಕ್ಷಗಳ ಚುನಾಯಿತ ಪ್ರತಿನಿಧಿಗಳು, ಶಿಕ್ಷಣ ತಜ್ಞರು ಮತ್ತು ಟೆಕ್ ದೈತ್ಯರಂತಹ ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ಆಧರಿಸಿ ಪರೀಕ್ಷೆಗಳನ್ನು ಮುಂದೂಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ : ಬೇಸಿಗೆಯಲ್ಲಿ ಲೆಮನ್ ಟೀ ಯಾಕೆ ಕುಡಿಯಬೇಕು..? ಇಲ್ಲಿದೆ 4 ಕಾರಣ.!


'ಸಮಾಲೋಚನೆಗಳ ಸಮಯದಲ್ಲಿ, ನಮ್ಮ ವಿದ್ಯಾರ್ಥಿಗಳ ಆರೋಗ್ಯ, ಯೋಗಕ್ಷೇಮ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ವಿವಿಧ ಪರ್ಯಾಯ ಆಯ್ಕೆಗಳನ್ನು ಮೌಲ್ಯಮಾಪನ ಮಾಡಲಾಗಿದೆ.ಪರೀಕ್ಷೆಗಳನ್ನು ಮುಂದೂಡುವುದು ಅತ್ಯಂತ ಪ್ರಾಯೋಗಿಕ ಪರಿಹಾರವೆಂದು ತೋರುತ್ತಿದೆ" ಎಂದು ಅವರು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.