ಬಾಂದಾ: ಉದ್ಯೋಗ ಪಡೆಯುವಲ್ಲಿ ವಿಫಲನಾದ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಿಟಿ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜರೈಲಿ ಕೋಥಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಇಲ್ಲಿನ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಎಜುಕೇಶನ್ (ಬಿ.ಎಡ್) ಪದವಿ ವಿದ್ಯಾರ್ಥಿ ನಾಗೇಂದ್ರ ಸಿಂಗ್ ಎಂಬಾತನ ಶವ ತನ್ನ ಬಾಡಿಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿ ಬಲ್ಜಿತ್ ಸಿಂಗ್ ತಿಳಿಸಿದ್ದಾರೆ.


ಆತ್ಮಹತ್ಯೆಗೂ ಮುನ್ನ ನಾಗೇಂದ್ರ ತನ್ನ ಕೋಣೆಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ಕೆಲಸ ಸಿಗ ಕಾರಣ ಆತ್ಮಹತ್ಯೆ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.