ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕಿನ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಊರ್ಜಿತ್ ಪಟೇಲ್ ಅವರು ಗವರ್ನರ್ ಹುದ್ದೆಗೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಶಕ್ತಿಕಾಂತ್ ದಾಸ್ ಅವರನ್ನು ನೂತನ ಗವರ್ನರ್ ಆಗಿ ಮಂಗಳವಾರ ನೇಮಕ ಮಾಡಲಾಗಿತ್ತು. ಆದರೆ, ಈ ನೇಮಕಕ್ಕೆ ವಿರೋಧ ವ್ಯಕ್ತಪಡಿಸಿರುವ ಸುಬ್ರಮಣಿಯನ್ ಸ್ವಾಮಿ ಪ್ರಧಾನ ಮಂತ್ರಿಗೆ ಆಕ್ಷೇಪಣಾ ಪತ್ರ ಬರೆದಿದ್ದಾರೆ. 


ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, "ಈ ಹಿಂದೆ ಕೇಂದ್ರ ಹಣಕಾಸು ಸಚಿವರಾಗಿದ್ದ ಪಿ.ಚಿದಂಬರಂ ಅವರ ಭ್ರಷ್ಟಾಚಾರ ಕಾರ್ಯಗಳಲ್ಲಿ ಶಕ್ತಿಕಾಂತ್ ದಾಸ್ ಸಾಥ್ ನೀಡಿದ್ದರು. ಅಷ್ಟೇ ಅಲ್ಲದೆ ಅವರನ್ನು ನ್ಯಾಯಾಲಯ ಪ್ರಕರಣದಿಂದ ರಕ್ಷಿಸಲು ಪ್ರಯತ್ನಿಸಿದ್ದರು. ಹಾಗಾಗಿ ಭಾರತೀಯ ರಿಸರ್ವ್ ಬ್ಯಾಂಕಿನ ನೂತನ ಗವರ್ನರ್ ಆಗಿ ಆಯ್ಕೆ ಮಾಡಿರುವುದು ಸೂಕ್ತವಲ್ಲ. ಈ ಬಗ್ಗೆ ಪ್ರಧಾನಮಂತ್ರಿಗೆ ಪತ್ರ ಬರೆಯಲಾಗಿದೆ" ಎಂದು ಹೇಳಿದ್ದಾರೆ.