ನವದೆಹಲಿ: ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಕರ್ನಾಟಕದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ತೀವ್ರ ಮುಖಭಂಗವಾದಂತಾಗಿದೆ.


COMMERCIAL BREAK
SCROLL TO CONTINUE READING

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವಂಗತ ನಟ ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರುಸುಮಲತಾ ವಿರುದ್ಧ ಸ್ಪರ್ಧಿಸಿದ್ದರು. ಆದರೆ, ಇಂದು ನಡೆದ ಚುನಾವಣೆಯ ಮತ ಎಣಿಕೆಯಲ್ಲಿ ಫಲಿತಾಂಶ ಹೊರಬಿದ್ದಿದ್ದು, ಸುಮಲತಾ ಅಂಬರೀಶ್ 6,25,553 ಮತ ಗಳಿಸುವ ಮೂಲಕ ಗೆಲುವು ಸಾಧಿಸಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 5,22,823 ಮತ ಪಡೆದು ಪರಾಭವಗೊಂಡಿದ್ದಾರೆ.


ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅವರಿಗೆ ಬಿಜೆಪಿ ತನ್ನ ಭಯ್ರ್ಥಿಯನ್ನು ಕಣಕ್ಕಿಳಿಸದೆ ಬೆಂಬಲ ಘೋಷಿಸಿತ್ತು. ಸುಮಲತಾ ಪರವಾಗಿ ಕನ್ನಡ ಚಿತ್ರರಂಗದ ನಟರಾದ ದರ್ಶನ್, ಯಶ್, ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಪ್ರಚಾರ ನಡೆಸಿದ್ದರು. ಚುನಾವಣಾ ಸಭೆಗಳಲ್ಲಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆದು, ಭಾರೀ ಚರ್ಚೆಗೆ ಗ್ರಾಸವಾಗಿತ್ತು.