ಸುನಂದಾ ಪುಷ್ಕರ್ ಸಾವು ಪ್ರಕರಣ: ಕಾಂಗ್ರೆಸ್ ನಾಯಕ ಶಶಿ ತರೂರ್ ಖುಲಾಸೆ..!
ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಖುಲಾಸೆಗೊಂಡಿದ್ದಾರೆ.
ನವದೆಹಲಿ: ದೇಶದಲ್ಲಿ ಸಖತ್ ಸದ್ದು ಮಾಡಿದ್ದ ಸುನಂದಾ ಪುಷ್ಕರ್ ಸಾವಿನ ಪ್ರಕರಣ(Sunanda Pushkar death case)ಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಗೆ ಬಿಗ್ ರಿಲೀಫ್ ದೊರೆತಿದೆ. ದೆಹಲಿ ಹೈಕೋರ್ಟ್ ಬುಧವಾರ ಮಹತ್ವದ ಆದೇಶ ಹೊರಡಿಸಿದ್ದು, ಪ್ರಕರಣದಲ್ಲಿ ಶಶಿ ತರೂರ್ ಅವರನ್ನು ಖುಲಾಸೆಗೊಳಿಸಿದೆ.
Sunanda Pushkar) ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿರುವ ವಿವಿಧ ತಜ್ಞರು ಸುನಂದಾ ಸಾವಿಗೆ ಕಾರಣವೇನೆಂದು ನಿಖರ ಅಭಿಪ್ರಾಯ ನೀಡಿಲ್ಲ. ಹೀಗಾಗಿ ತಮ್ಮ ವಿರುದ್ಧದ ಆರೋಪ ಕೈಬಿಡುವಂತೆ ತರೂರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಿತು. ತರೂರ್ ಮನವಿ ಪುರಸ್ಕರಿಸಿದ ದೆಹಲಿ ಹೈಕೋರ್ಟ್ ಅವರ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಸೂಚಿಸಿದೆ. ಈ ಮೂಲಕ ತರೂರ್(Shashi Tharoor) ಆರೋಪಮುಕ್ತರಾಗಿದ್ದು, ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದ ಕುಲಗಾಮ್ ನಲ್ಲಿ ಭಯೋತ್ಪಾದಕ ದಾಳಿ ; ಬಿಜೆಪಿ ನಾಯಕ ಜಾವೇದ್ ಅಹಮ್ಮದ್ ದಾರ್ ಹತ್ಯೆ
7 ವರ್ಷಗಳ ಹಿಂಸೆ ಕೊನೆಗೂಂಡಿದೆ
Delhi HighCourt)ಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಈ ಬ್ಯಾಂಕ್ ಗ್ರಾಹಕರಿಗೆ ನೀಡುತ್ತಿದೆ 2 ಲಕ್ಷ ರೂ. ಗಳ ಲಾಭ, ಬಳಸಿಕೊಳ್ಳುವುದು ಹೇಗೆ ತಿಳಿಯಿರಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ