ಎಸ್ಪಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ `ಈ ಅರ್ಜಿಯಲ್ಲಿ ವಿಚಾರಣೆಗೆ ಅಗತ್ಯವಾದ ಯಾವುದೇ ಅರ್ಹತೆಯಿಲ್ಲ` ಎಂದು ಹೇಳಿ, ಅರ್ಜಿಯನ್ನು ವಜಾಗೊಳಿಸಿದೆ.
ನವದೆಹಲಿ: ನಾಮಪತ್ರ ತಿರಸ್ಕಾರ ಪ್ರಶ್ನಿಸಿ ವಾರಣಾಸಿ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ, ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಸಲ್ಲಿಸಿದ್ದ ಮೇಲ್ಮನವಿಯನ್ನು ಗುರುವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ನಾಮಪತ್ರ ತಿರಸ್ಕೃತ ಹಿನ್ನೆಲೆ: ಸುಪ್ರೀಂ ಮೆಟ್ಟಿಲೇರಿದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್
ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಎಸ್ಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್, ಸಕಾಲಕ್ಕೆ ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಸದ ಕಾರಣ ಚುನಾವಣಾ ಆಯೋಗ ನಾಮಪತ್ರವನ್ನು ರದ್ದುಪಡಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಯಾದವ್ ಮೇ 6ರಂದು ಸುಪ್ರಿಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು.