IIT-JEE ಹಾಗೂ NEET ಪರೀಕ್ಷೆಗಳನ್ನು ಸ್ಥಗಿತಗೊಳಿಸಲು ನಿರಾಕರಿಸಿದ ಸುಪ್ರೀಂ, ಪರೀಕ್ಷೆ ಯಾವಾಗ ಇಲ್ಲಿ ತಿಳಿಯಿರಿ

ಕೊರೊನಾವೈರಸ್ ಪ್ರಕೋಪದ ಹಿನ್ನೆಲೆಯಲ್ಲಿ ಐಐಟಿ-ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂಬ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಐಐಟಿ-ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಡೆಸಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡಿದೆ.

Last Updated : Aug 17, 2020, 05:13 PM IST
IIT-JEE ಹಾಗೂ NEET ಪರೀಕ್ಷೆಗಳನ್ನು ಸ್ಥಗಿತಗೊಳಿಸಲು ನಿರಾಕರಿಸಿದ ಸುಪ್ರೀಂ, ಪರೀಕ್ಷೆ ಯಾವಾಗ ಇಲ್ಲಿ ತಿಳಿಯಿರಿ  title=

ನವದೆಹಲಿ: ಇಂಜಿನಿಯರ್ ಹಾಗೂ ವೈದ್ಯರಾಗಬೇಕೆಂದು ಕನಸು ಕಾಣುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಸುದ್ದಿಯೊಂದು ಪ್ರಕಟವಾಗಿದೆ ಕೊರೊನಾ ವೈರಸ್ ಪ್ರಕೋಪದ ಹಿನ್ನೆಲೆ ಐಐಟಿ -ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಹೀಗಾಗಿ ಈ ಪರೀಕ್ಷೆಗಳನ್ನು ನಡೆಸಲು ಇದೀಗ ಸರ್ವೊಚ್ಛ ನ್ಯಾಯಾಲಯದ ಹಸಿರು ನಿಶಾನೆ ಸಿಕ್ಕಂತಾಗಿದೆ.

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ (Main) ಮುಂದೂಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ಪೀಠ ಸೋಮವಾರ ತಿರಸ್ಕರಿಸಿದೆ. ಅರ್ಜಿಯನ್ನು ವಜಾಗೊಳಿಸಿದ ನ್ಯಾಯಪೀಠ, ದೇಶದಲ್ಲಿ ಎಲ್ಲವನ್ನೂ ನಿಲ್ಲಿಸಬೇಕೆ? ಅಮೂಲ್ಯವಾದ ಒಂದು ವರ್ಷವನ್ನು ವ್ಯರ್ಥ ಮಾಡಬೇಕೇ? ಎಂದು ಪ್ರಶ್ನಿಸಿದೆ.

ಕರೋನಾ ವೈರಸ್ ಸೋಂಕಿನ ಪ್ರಕೋಪ ಹೆಚ್ಚುತ್ತಿರುವ ಹಿನ್ನೆಲೆ ಸೆಪ್ಟೆಂಬರ್‌ನಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಐಐಟಿ-ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು ಜೆಇಇ ಪರೀಕ್ಷೆ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 6 ರವರೆಗೆ ನಡೆಯಲಿದ್ದು, ನೀಟ್ ಪರೀಕ್ಷೆ ಸೆಪ್ಟೆಂಬರ್ 13 ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಇತ್ತೀಚೆಗೆ ತಿಳಿಸಿತ್ತು ಎಂಬುದು ಇಲ್ಲಿ ಉಲ್ಲೇಖನೀಯ.

11 ವಿವಿಧ ರಾಜ್ಯಗಳ 11 ವಿದ್ಯಾರ್ಥಿಗಳು ದೇಶಾದ್ಯಂತ ವೇಗವಾಗಿ ಪಸರಿರುತ್ತಿರುವ ಕೊವಿಡ್-19 ಮಹಾಮಾರಿ ಪ್ರಕರಣಗಳ ಸಂಖ್ಯೆಯ ಹಿನ್ನೆಲೆ ಜೆಇಇ-ಮೇನ್ ಹಾಗೋ ನೀಟ್ ಯುಜಿ ಪರೀಕ್ಷೆಗಳನ್ನು ಸ್ಥಗಿತಗೊಳಿಸುವಂತೆ ಕೋರಿ ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ ಕೊರೊನಾ ವೈರಸ್ ಪ್ರಕೋಪವನ್ನು ಪ್ರಸ್ತಾಪಿಸಿದ್ದ ವಿದ್ಯಾರ್ಥಿಗಳು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಜುಲೈ 3 ರಂದು ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಕೋರಿದ್ದರು.

Trending News