ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ.ಮುಂದಿನ ವಾರ ವಿಚಾರಣೆ ಪೂರ್ಣಗೊಳಿಸಿ ಕೇಜ್ರಿವಾಲ್ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಬಗ್ಗೆ ತೀರ್ಮಾನ ನೀಡಲು ಪ್ರಯತ್ನಿಸುತ್ತೇವೆ ಎಂದೂ ಕೋರ್ಟ್ ಹೇಳಿದೆ.ಆ ಮೂಲಕ ಚುನಾವಣೆಗೆ ಮುನ್ನ ಜಾಮೀನಿಗಾಗಿ ಕಾಯುತ್ತಿರುವ ಸಿಎಂ ಕೇಜ್ರಿವಾಲ್ ಮತ್ತು ಅವರ ಆಮ್ ಆದ್ಮಿ ಪಕ್ಷಕ್ಕೆ ಇದು ಸಮಾಧಾನದ ಸುದ್ದಿಯಾಗಿದೆ.


COMMERCIAL BREAK
SCROLL TO CONTINUE READING

ಸುದೀರ್ಘ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ತನ್ನ ಆದೇಶವನ್ನು ನೀಡಿದ್ದು, ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಕೇಜ್ರಿವಾಲ್ ಜೂನ್ 2 ರಂದು ಶರಣಾಗಬೇಕು. ಆದರೆ, ಕೇಂದ್ರ ತನಿಖಾ ಸಂಸ್ಥೆ ಇಡಿ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿತ್ತು.


ಇದನ್ನೂ ಓದಿ: KSEAB Karnataka SSLC Results 2024 Live Updates: SSLC ಫಲಿತಾಂಶ ಪ್ರಕಟ  : ನಿಮ್ಮ ಅಂಕ ಪಟ್ಟಿಯನ್ನು ಇಲ್ಲಿ ಪರಿಶೀಲಿಸಿ 


ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಪಡೆದ ನಂತರ ಇದೀಗ ಸುಪ್ರೀಂ ಕೋರ್ಟ್ ಆದೇಶವನ್ನು ವಿಚಾರಣಾ ನ್ಯಾಯಾಲಯಕ್ಕೆ ಕಳುಹಿಸಲಾಗುವುದು. ನಂತರ ವಿಚಾರಣಾ ನ್ಯಾಯಾಲಯದಿಂದ ಬಿಡುಗಡೆ ಆದೇಶವನ್ನು ತಿಹಾರ್ ಜೈಲು ಆಡಳಿತಕ್ಕೆ ಕಳುಹಿಸಲಾಗುತ್ತದೆ.ತಿಹಾರ್ ಜೈಲಿನಲ್ಲಿ ಪ್ರತಿದಿನ ಬರುವ ಎಲ್ಲಾ ಬಿಡುಗಡೆ ಆದೇಶಗಳನ್ನು ಸುಮಾರು ಒಂದು ಗಂಟೆಯಲ್ಲಿ ವಿಲೇವಾರಿ ಮಾಡಲಾಗುತ್ತದೆ. ಆದ್ದರಿಂದ ಅರವಿಂದ್ ಕೇಜ್ರಿವಾಲ್ ಅವರು ಇಂದೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.


ಕೇಜ್ರಿವಾಲ್ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಷರತ್ತುಗಳನ್ನು ಹಾಕಿಲ್ಲ. ಈಗ ಅವರು ಚುನಾವಣೆಯ ಕೊನೆಯ ಹಂತದವರೆಗೆ ದೇಶಾದ್ಯಂತ ತಿರುಗಾಡಲು ಮತ್ತು ಎಲ್ಲಿ ಬೇಕಾದರೂ ಪ್ರಚಾರ ಮಾಡಲು ಸಾಧ್ಯವಾಗುತ್ತದೆ. ಕೇಜ್ರಿವಾಲ್ ಅವರನ್ನು ಇಂದು ತಿಹಾರ್‌ನಿಂದ ಬಿಡುಗಡೆ ಮಾಡಲು ಪ್ರಯತ್ನಿಸುತ್ತೇವೆ ಎಂದು ಕೇಜ್ರಿವಾಲ್ ಪರ ವಕೀಲರು ಹೇಳಿದ್ದಾರೆ.


ಇದನ್ನೂ ಓದಿ: Karnataka SSLC Results 2024 :ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ 


ಈ ಹಿಂದೆ ಮೇ 7ರಂದು ನಡೆದ ವಿಚಾರಣೆ ವೇಳೆ ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡರೂ ಸಿಎಂ ಆಗಿ ಅಧಿಕೃತ ಕರ್ತವ್ಯ ನಿರ್ವಹಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಮುಖ್ಯಮಂತ್ರಿಯಾಗಿ ಅಧಿಕೃತ ಕರ್ತವ್ಯ ನಿರ್ವಹಿಸಿದರೆ ಸಂಘರ್ಷವಾಗುತ್ತದೆ. ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕರೆ ಅದನ್ನು ಚುನಾವಣಾ ಪ್ರಚಾರಕ್ಕೆ ಮಾತ್ರ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.