ನವದೆಹಲಿ: ಕೋವಿಡ್‌-19 ಪಿಡುಗಿನ ಸಂದರ್ಭದಲ್ಲಿ ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಇದ್ದು, ಈಗ ಅವರ ಪಾಲಕರೊಂದಿಗಿರುವ ಪ್ರತಿ ಮಗುವಿನ ಶಿಕ್ಷಣಕ್ಕೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವಂತೆ ಸುಪ್ರೀಂಕೋರ್ಟ್‌ ಎಲ್ಲ ರಾಜ್ಯಗಳಿಗೆ ಇಂದು ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಶಿಫಾರಸಿನಂತೆ ಕೆಲವು ಮಕ್ಕಳು(Child) ಈಗಲೂ ಈ ಪಾಲನಾ ಕೇಂದ್ರಗಳಲ್ಲಿ ಇದ್ದಾರೆ. ಈ ಮಕ್ಕಳಿಗಾಗಿ ಆನ್‌ಲೈನ್‌ ತರಗತಿಗಳನ್ನು ನಡೆಸುವ ಸಲುವಾಗಿ ಪಾಲನಾ ಕೇಂದ್ರಗಳಿಗೆ ಪುಸ್ತಕ, ಸ್ಠೇಷನರಿ ಸಾಮಗ್ರಿ ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು 30 ದಿನಗಳ ಒಳಗಾಗಿ ಒದಗಿಸುವಂತೆಯೂ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.


'ಕಾಂಗ್ರೆಸ್ ಈಗ ಸದನದ ಒಳಗೂ ಗುಂಡಾಗಿರಿ ಮಾಡುತ್ತಿದೆ'


ನ್ಯಾಯಮೂರ್ತಿಗಳಾದ ಎಲ್‌.ನಾಗೇಶ್ವರರಾವ್‌, ಹೇಮಂತ್ ಗುಪ್ತ ಹಾಗೂ ಅಜಯ್‌ ರಸ್ತೋಗಿ ಅವರಿರುವ ನ್ಯಾಯಪೀಠ ಈ ವಿಷಯಕ್ಕೆ ಸಂಬಂಧಿಸಿ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ವೇಳೆ ಈ ನಿರ್ದೇಶನ ನೀಡಿತು.


ಗ್ರಾ. ಪಂ. ಚುನಾವಣೆ: ಅಭ್ಯರ್ಥಿಗಳು ಕಡ್ಡಾಯವಾಗಿ 'ಪಾಲಿಸಬೇಕಾದ ನಿಮಯ'ಗಳಿವು!


ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ಗೆ ನೆರವು ನೀಡುತ್ತಿರುವ ವಕೀಲ ಗೌರವ್ ಅಗ್ರವಾಲ್‌ ಅವರು, ಮಕ್ಕಳ ಪಾಲನಾ ಕೇಂದ್ರಗಳಿಗೆ ಬಾಲ ನ್ಯಾಯ ಮಂಡಳಿಗಳೂ ನೆರವು ನೀಡಬೇಕು. ಈ ಕೇಂದ್ರಗಳಲ್ಲಿ ಶಿಕ್ಷಕರನ್ನು ಸಹ ನೇಮಕ ಮಾಡಬೇಕು ಎಂದು ತಿಳಿಸಿದರು.


ದೇಶದೆದುರು 'ರಾಜ್ಯದ ಮಾನ ಹರಾಜು'- ವಿಧಾನ ಪರಿಷತ್'ನಲ್ಲಿ ಕಿತ್ತಾಡಿದ ಬಿಜೆಪಿ-ಕಾಂಗ್ರೆಸ್ ಸದಸ್ಯರು!


'ಮಕ್ಕಳ ರಕ್ಷಣೆ, ಅವರ ಶಿಕ್ಷಣಕ್ಕೆ ಸಂಬಂಧಿಸಿದ ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆಯೇ ಎಂಬುದನ್ನು ಮಕ್ಕಳ ಹಕ್ಕುಗಳ ಆಯೋಗ ಖಾತ್ರಿಪಡಿಸಿಕೊಳ್ಳಬೇಕು' ಎಂದೂ ನ್ಯಾಯಪೀಠ ಹೇಳಿತು.


ಬೇಸಿಗೆ ರಜೆಯನ್ನು ಬಲಿ ಪಡೆಯುವುದೇ ಕೊರೊನಾ?