ನವದೆಹಲಿ: ಪಂಜಾಬ್ ಮತ್ತು ಮಹಾರಾಷ್ಟ್ರ ಕೋ-ಆಪರೇಟಿವ್ ಬ್ಯಾಂಕ್ (ಪಿಎಮ್‌ಸಿ ಬ್ಯಾಂಕ್)ನಲ್ಲಿ ಹಣ ಹಿಂಪಡೆಯಲು ನಿಷೇಧವನ್ನು ವಿರೋಧಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ. 


COMMERCIAL BREAK
SCROLL TO CONTINUE READING

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಮತ್ತು ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರಿದ್ದ ತ್ರಿಸದಸ್ಯ ಪೀಠ, ಅರ್ಜಿದಾರರಿಗೆ ಹೈಕೋರ್ಟ್‌ಗೆ ಹೋಗುವಂತೆ ಸಲಹೆ ನೀಡಿ, ಅರ್ಜಿಯನ್ನು ವಜಾ ಮಾಡಿದೆ. 


ದೆಹಲಿ ಮೂಲದ ಕಾರ್ಯಕರ್ತ ಬೆಜೋನ್ ಕುಮಾರ್ ಮಿಶ್ರಾ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಹಣಕಾಸಿನ ಬಿಕ್ಕಟ್ಟಿನ ಸಂದರ್ಭದಲ್ಲಿ ಬ್ಯಾಂಕ್ ಠೇವಣಿಗಳಿಗೆ ಭದ್ರತೆ ಒದಗಿಸಲು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಆರ್‌ಬಿಐಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಅಷ್ಟೇ ಅಲ್ಲದೆ,  ಸಹಕಾರಿ ಬ್ಯಾಂಕುಗಳಲ್ಲಿ ಖಾತೆ ಹೊಂದಿರುವ ಠೇವಣಿದಾರರಿಗೆ 100% ವಿಮಾ ರಕ್ಷಣೆಯನ್ನು ಸಹ ಅರ್ಜಿಯಲ್ಲಿ ಕೋರಲಾಗಿತ್ತು.