ಮಾಹಿತಿ ಆಯುಕ್ತರ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ ಸರ್ಕಾರದ ವರದಿ ಕೇಳಿದ ಸುಪ್ರೀಂಕೋರ್ಟ್
ಈ ವರ್ಷದ ಫೆಬ್ರವರಿಯಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ, ಪಶ್ಚಿಮ ಬಂಗಾಳ, ಗುಜರಾತ್, ಕೇರಳ, ಕರ್ನಾಟಕ ಮತ್ತು ಕೇಂದ್ರ ಸರ್ಕಾರಕ್ಕೆ ಖಾಲಿ ಇರುವ ಮುಖ್ಯ ಮತ್ತು ರಾಜ್ಯ ಮಾಹಿತಿ ಆಯುಕ್ತರ ಹುದ್ದೆಗಳನ್ನು ಆರು ತಿಂಗಳಲ್ಲಿ ಭರ್ತಿ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ನವದೆಹಲಿ: ಕೇಂದ್ರ ಮಾಹಿತಿ ಆಯೋಗ (CIC) ಮತ್ತು ರಾಜ್ಯ ಮಾಹಿತಿ ಆಯೋಗಗಳ (SICs) ಖಾಲಿ ಹುದ್ದೆಗಳನ್ನು ನಾಲ್ಕು ವಾರಗಳಲ್ಲಿ ಭರ್ತಿ ಮಾಡದಿರುವ ಬಗ್ಗೆ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್(Supreme Court) ಬುಧವಾರ ಕೇಳಿದೆ.
ಈ ವರ್ಷದ ಫೆಬ್ರವರಿಯಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ, ಪಶ್ಚಿಮ ಬಂಗಾಳ, ಗುಜರಾತ್, ಕೇರಳ, ಕರ್ನಾಟಕ ಮತ್ತು ಕೇಂದ್ರ ಸರ್ಕಾರಕ್ಕೆ ಖಾಲಿ ಇರುವ ಮುಖ್ಯ ಮತ್ತು ರಾಜ್ಯ ಮಾಹಿತಿ ಆಯುಕ್ತರ ಹುದ್ದೆಗಳನ್ನು ಆರು ತಿಂಗಳಲ್ಲಿ ಭರ್ತಿ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಖಾಲಿ ಇರುವ ಹುದ್ದೆಗಳನ್ನು "ಪಾರದರ್ಶಕ ಮತ್ತು ಸಮಯಕ್ಕೆ ಅನುಗುಣವಾಗಿ" ಭರ್ತಿ ಮಾಡುವಂತೆ ಆರ್‌ಟಿಐ ಕಾರ್ಯಕರ್ತರೊಬ್ಬರು ಆಯಾ ಸರ್ಕಾರಗಳಿಗೆ ನಿರ್ದೇಶನ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾದ ವಕೀಲ ಪ್ರಶಾಂತ್ ಭೂಷಣ್(Prashant Bhushan), ನ್ಯಾಯಾಲಯದ ಸೂಚನೆ ಹೊರತಾಗಿಯೂ ಸರ್ಕಾರಗಳು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ವಿಚಾರಣೆ ಆಲಿಸಿದ ಪೀಠ ಕೇಂದ್ರ ಮಾಹಿತಿ ಆಯೋಗ (CIC) ಮತ್ತು ರಾಜ್ಯ ಮಾಹಿತಿ ಆಯೋಗಗಳ (SICs) ಖಾಲಿ ಹುದ್ದೆಗಳನ್ನು ನಾಲ್ಕು ವಾರಗಳಲ್ಲಿ ಭರ್ತಿ ಮಾಡದಿರುವ ಬಗ್ಗೆ ವರದಿ ಸಲ್ಲಿಸುವಂತೆ ಕೇಂದ್ರ ಹಾಗೂ ಸಂಬಂಧಿತ ರಾಜ್ಯ ಸರ್ಕಾರಗಳಿಗೆ ಆದೇಶಿಸಿದೆ.
With ANI Inputs